ಬೆಂಗಳೂರು: ಹನಿಟ್ರ್ಯಾಪ್ ಅವಾಂತರದ ಬೆನ್ನಲ್ಲೇ ಇದೀಗ ರಾಜ್ಯ ರಾಜಕಾರಣವನ್ನು ಫೋನ್ ಕದ್ದಾಲಿಕೆ ಗುಮ್ಮಾ ಕಾಡತೊಡಗಿದೆ. ಸರ್ಕಾರ ಪ್ರಮುಖ ನಾಯಕರ ಫೋನ್ ಕದ್ದಾಲಿಕೆ ಮಾಡುತ್ತಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಅಶೋಕ್ ಅವರು ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು. ಸಚಿವ ರಾಜಣ್ಣ ಹಾಗೂ ಅವರ ಮಗ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅನುಮತಿ ಪಡೆದು ಹನಿಟ್ರ್ಯಾಪ್ ಬಗ್ಗೆ ಮಾತಾಡಿದ್ದಾರೆ. ಈ ಮೂಲಕ ಇದರ ಸೂತ್ರದಾರರು ಯಾರೆಂದು ತಿಳಿದುಬಂದಿದೆ. ದೆಹಲಿಯಿಂದ ಮಲ್ಲಿಕಾರ್ಜುನ ಖರ್ಗೆಯವರೇ ಬಂದು ಚರ್ಚೆ ನಡೆಸುವ ಸ್ಥಿತಿ ಬಂದಿದೆ. ಇಲ್ಲಿ ಕುರ್ಚಿಗಾಗಿ ಕಾದಾಟ ನಡೆಯುತ್ತಿದೆ ಎಂದರು.
ಸರ್ಕಾರ ಪ್ರಮುಖ ನಾಯಕರ ಫೋನ್ ಕದ್ದಾಲಿಕೆ ಮಾಡುತ್ತಿದೆ. ಆಡಳಿತ ಪಕ್ಷದ ಶಾಸಕರೇ ಇದನ್ನು ಹೇಳಿದ್ದಾರೆ. ವಿರೋಧಿಗಳನ್ನು ಬಗ್ಗು ಬಡಿಯಬೇಕೆಂಬ ಕಾರಣಕ್ಕೆ ಹೀಗೆ ಮಾಡಲಾಗುತ್ತಿದೆ. ಇದರಲ್ಲಿ ಅನುಮಾನವೇ ಬೇಡ ಎಂದವರು ಹೇಳಿದರು.