ಮಂಗಳೂರು: ಬಿ.ವೈ. ವಿಜಯೇಂದ್ರ ಅವರು ರಾಜ್ಯ ಬಿಜೆಪಿಯ ಸಾರಥ್ಯ ವಹಿಸಿಕೊಳ್ಳುತ್ತಿದ್ದಂತೆಯೇ, ಸ್ಥಳೀಯ ಸಂಸ್ಥೆಗಳಲ್ಲಿ ಕಮಲಾ ಪಕ್ಷದ ಗೆಲುವಿನ ಅಭಿಯಾನ ಆರಂಭವಾಗಿದೆ. ಈ ಬಗ್ಗೆ ಕೇಸರಿ ಸೈನ್ಯದಲ್ಲಿ ಉತ್ಸಾಹ ಹೆಚ್ಚಾಗಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ರಣೋತ್ಸಾಹದಲ್ಲಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ದಕ್ಷಿಣ ಕನ್ನಡ ಜಿಲ್ಲೆಯ ಸೋಮೇಶ್ವರ ಪುರಸಭೆಯ ಸಾಮಾನ್ಯ ಚುನಾವಣೆಯಲ್ಲಿ 16 ಸ್ಥಾನಗಳಲ್ಲಿ ಪ್ರಚಂಡ ದಿಗ್ವಿಜಯ ಸಾಧಿಸಿ ಅಧಿಕಾರ ಚುಕ್ಕಾಣಿ ಹಿಡಿದಿದ್ದೇವೆ. ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣ ಪಂಚಾಯ್ತಿಯ 8 ಸ್ಥಾನಗಳಲ್ಲಿ ಗೆಲುವು ಸಾಧಿಸಿ ಅಧಿಕಾರ ಚುಕ್ಕಾಣಿಯ ಹೊಸ್ತಿಲಿಗೆ ತಲುಪಿದ್ದೇವೆ. ರಾಜ್ಯದ ವಿವಿಧ ಭಾಗಗಳಲ್ಲಿನ ಚುನಾವಣೆಯಲ್ಲಿಯೂ ಸಹ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದೇವೆ ಎಂದು ಸಂತಸ ಹಂಚಿಕೊಂಡಿದ್ದಾರೆ.
ಎಲ್ಲ ಅಭ್ಯರ್ಥಿಗಳನ್ನೂ ಅಭಿನಂಧಿಸಿರುವ ವಿಜಯೇಂದ್ರ, ಗಣನೀಯ ಮಟ್ಟದಲ್ಲಿ ಪಕ್ಷಕ್ಕೆ ಮತ ನೀಡಿದ ಮತದಾರರ ಶ್ರಮವನ್ನೂ ಸ್ಮರಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಸೋಮೇಶ್ವರ ಪುರಸಭೆಯ ಸಾಮಾನ್ಯ ಚುನಾವಣೆಯಲ್ಲಿ 16 ಸ್ಥಾನಗಳಲ್ಲಿ ಪ್ರಚಂಡ ದಿಗ್ವಿಜಯ ಸಾಧಿಸಿ ಅಧಿಕಾರ ಚುಕ್ಕಾಣಿ ಹಿಡಿದಿದ್ದು, ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣ ಪಂಚಾಯ್ತಿಯ 8 ಸ್ಥಾನಗಳಲ್ಲಿ ಗೆಲುವು ಸಾಧಿಸಿ ಅಧಿಕಾರ ಚುಕ್ಕಾಣಿಯ ಹೊಸ್ತಿಲಿಗೆ ತಲುಪಿದ್ದೇವೆ.
ರಾಜ್ಯದ ವಿವಿಧ ಭಾಗಗಳಲ್ಲಿನ ಚುನಾವಣೆಯಲ್ಲಿಯೂ ಸಹ ಬಿಜೆಪಿ…— Vijayendra Yediyurappa (Modi Ka Parivar) (@BYVijayendra) December 30, 2023






















































