ಕೃಷಿ ಉತ್ಪನ್ನಗಳ ಮೇಲಿನ ಜಿಎಸ್‌ಟಿ ತೆರಿಗೆ ರದ್ದು ಮಾಡಿ. ರೈತ ಉತ್ಪಾದಕ ಸಂಸ್ಥೆಗಳ ವರಮಾನ ತೆರಿಗೆ ಹಾಗೂ ಎಂಐಟಿ ತೆರಿಗೆ ಕಾನೂನು ರದ್ದು ಮಾಡಿ ಎಂದು ರೈತ ಸಂಘಟನೆಗಳು ಮಾಡಿರುವ ಮನವಿಗೆ ಸ್ಪಂಧಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭರವಸೆ ನೀಡಿದ್ದಾರೆ.
ರೈತರು ಖರೀದಿಸುವ ಕೃಷಿ ಬಳಕೆಗೆ ಹನಿ ನೀರಾವರಿ ಕೊಳವೆಗಳು. ಕೀಟನಾಶಕಗಳು. ರಸಗೊಬ್ಬರಗಳ ಮೇಲೆ ಜಿಎಸ್‌ಟಿ ವಿಧಿಸಿರುವುರಿಂದ ರೈತರು ಖರೀದಿಸುವ ಬೆಲೆ ಹೆಚ್ಚಾಗುತ್ತಿದೆ. ಇದು ರೈತರಿಗೆ ನುಂಗಲಾರದ ತುತ್ತಾಗಿದೆ ಇದನ್ನು ರದ್ದು ಮಾಡಬೇಕೆಂದು ಹಲವಾರು ವರ್ಷಗಳಿಂದ ರಾಜ್ಯ ಸರ್ಕಾರಕ್ಕೆ ಹಾಗೂ ಕೇಂದ್ರ ಸರ್ಕಾರಕ್ಕೆ ಹಲವಾರು ಮನವಿಗಳನ್ನು ಸಲ್ಲಿಸಿದ್ದೇವೆ ತಾವು ರೈತರ ಬಗ್ಗೆ ವಿಶೇಷ ಕಾಳಜಿ ವಹಿಸಿ ಕೃಷಿ ಉಪಕರಣಗಳ ಖರೀದಿಯ ಮೇಲೆ ಜಿಎಸ್‌ಟಿಯನ್ನು ರದ್ದು ಮಾಡಬೇಕು ಎಂದು ರೈತ ಸಂಘಟನೆಗಳು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿವೆ.
ಕೇಂದ್ರ ಸರ್ಕಾರ ರೈತ ಉತ್ಪಾದಕ ಸಂಸ್ಥೆಗಳನ್ನು ಆರಂಭಿಸಲು ಪ್ರೋತ್ಸಾಹ ಧನ ನೀಡಿದೆ. ಆದರೆ ಈ ಉತ್ಪಾದಕ ಸಂಸ್ಥೆಗಳಿಗೆ ವರಮಾನ ತೆರಿಗೆ ವಿಧಿಸಲಾಗುತ್ತಿದೆ ಹಾಗೂ ಎಂಎಟಿ ತೆರಿಗೆ ಪಾವತಿಸಬೇಕೆಂದು ಈಗಾಗಲೇ ನೂರಾರು ರೈತ ಉತ್ಪಾದಕ ಸಂಸ್ಥೆಗಳಿಗೆ ವಸುಲಾತಿ ನೋಟಿಸ್ ವರಮಾನ ತೆರಿಗೆ ಇಲಾಖೆಯಿಂದ ನೀಡಲಾಗಿದೆ ಇದರಿಂದ ನಷ್ಟದಲ್ಲಿರುವ ಸಂಕಷ್ಟ ಅನುಭವಿಸುತ್ತಿರುವ ರೈತ ಉತ್ಪಾದಕ ಸಂಸ್ಥೆಗಳ ಮುಖ್ಯಸ್ಥರು ಚಿಂತಾ ಕ್ರಾಂತರಾಗಿದ್ದಾರೆ. ಇದೆ ಕೇಂದ್ರ ಸರ್ಕಾರ ರೈತರಿಂದಲೇ ರೈತರಿಗಾಗಿ ಆರಂಬವಾಗಿರುವ ಸಹಕಾರ ಸಂಘಗಳಿಗೆ ತೆರಿಗೆ ವಿನಾಯಿತಿ ನೀಡಿದೆ. ಆದರೆ ರೈತರಿಂದಲೇ ರೈತರಿಗಾಗಿ ಕಂಪನಿ ಕಾಯ್ದೆಯಲ್ಲಿ ಆರಂಭವಾಗಿರುವ ಉತ್ಪಾದಕ ಸಂಸ್ಥೆಗಳಿಗೆ ಎಂಏಟಿ ತೆರಿಗೆ, ವರಮಾನ ತೆರಿಗೆ
ವಿಧಿಸುವುದು ನ್ಯಾಯವಲ್ಲ. ಕೇಂದ್ರ ಸರ್ಕಾರ ಆದೇಶದಲ್ಲಿ ಸಹಕಾರ ಸಂಘಗಳು ಹಾಗೂ ರೈತ ಉತ್ಪಾದಕ ಸಂಸ್ಥೆಗಳು ಸಮಾನಾಂತರ ಅವಕಾಶಗಳನ್ನು ಹೊಂದಬಹುದು ಎಂದು ಕೇಂದ್ರ ಸರ್ಕಾರದ ಆದೇಶದಲ್ಲಿ ತಿಳಿಸಿದ್ದಾರೆ ಈ ಎಲ್ಲ ವಿಚಾರಗಳನ್ನ ಗಮನಿಸಿ ಹತ್ತು ವರ್ಷಗಳ ಕಾಲ ತೆರಿಗೆ ವಸುಲಾತಿ ಕಾನೂನು ರದ್ದು ಮಾಡುವ ಆದೇಶ ಹೊರಡಿಸಬೇಕೆಂದು ಕುರುಬೂರ್ ಶಾಂತಕುಮಾರ್ ಒತ್ತಾಯಿಸಿದ್ದಾರೆ.
ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬುರ್ ಶಾಂತಕುಮಾರ್ ನೇತೃತ್ವದಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾದ ನಿಯೋಗದಲ್ಲಿ ರೈತ ಮುಖಂಡರುಗಳಾದ
ಹತ್ತಳ್ಳಿ ದೇವರಾಜ್ ಬರಡನಪುರ ನಾಗರಾಜ್, ಮಾರ್ಬಳ್ಳಿ ನೀಲಕಂಠಪ್ಪ. ಕುರುಬೂರು ಸಿದ್ದೇಶ್, ಲಕ್ಷ್ಮಿಪುರ ವೆಂಕಟೇಶ್, ಅಂಬಳೆ ಮಂಜುನಾಥ್,
ಕುರುಬೂರು ಪ್ರದೀಪ್, ಕಾಟೂರ್ ನಾಗೇಶ್, ಬನ್ನೂರ್ ಸೂರಿ ಮೊದಲಾದವರು ಇದ್ದರು.