ದೆಹಲಿ: ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಆರೋಗ್ಯ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಅವರಿಗೆ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಗುರುಗ್ರಾಮದಲ್ಲಿರುವ ಮೆದಾಂತ ಆಸ್ಪತ್ರೆಯಲ್ಲಿ ಅಹ್ಮದ್ ಪಟೇಲ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್-19 ಸೋಂಕಿಗೊಳಗಾಗಿರುವ ಅವರು ಇದೀಗ ಚಿಕಿತ್ಸೆಗೆ ಸ್ಪಂಧಿಸುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಅಹ್ಮದ್ ಪಟೇಲ್ ಆರೋಗ್ಯ ಸ್ಥಿತಿ ಬಗ್ಗೆ ಟ್ವೀಟ್ ಮಾಡಿದ್ದ ಅವರ ಪುತ್ರ, ತಮ್ಮ ತಂದೆ ಐಸಿಯುಗೆ ದಾಖಲಾಗಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಶೀಘ್ರ ಚೇತರಿಕೆಯಾಗಲು ನಿಮ್ಮೆಲ್ಲರ ಪ್ರಾರ್ಥನೆ ಅಗತ್ಯ ಎಂದು ಅವರು ಹೇಳಿಕೊಂಡಿದ್ದಾರೆ.