ದೆಹಲಿ: ಎಐಸಿಸಿ ಅಧ್ಯಕ್ಷರಾಗಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಧ್ಯಕ್ಷಗಾದಿಗಾಗಿ ನಡೆದ ಚುನಾವಣೆಯಲ್ಲಿ ಖರ್ಗೆ ಜಯಗಳಿಸಿದ್ದಾರೆ.
ಹಿರಿಯ ಮುಖಂಡ ಶಶಿ ತರೂರ್ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಅಖಾಡದಲ್ಲಿದ್ದರು. ಗಾಂಧಿ ಕುಟುಂಬ ಬೆಂಬಲಿಯ ಅಭ್ಯರ್ಥಿ ಎಂದೇ ಗುರುತಿಸಲ್ಪಟ್ಟಿದ್ದ ಮಲ್ಲಿಕಾರ್ಜುನ ಖರ್ಗೆ ಅವರು ನಿರೀಕ್ಷೆಯಂತೆ ಚುನಾಯಿತರಾಗಿದ್ದಾರೆ.
ಮತಗಳ ವಿವರ:
ಮಲ್ಲಿಕಾರ್ಜುನ ಖರ್ಗೆ : 7,897
ಶಶಿ ತರೂರ್ : 1,000
ತಿರಸ್ಕೃತ : 416
ಗೆಲುವಿನ ಅಂತರ : 6,897
ಎಐಸಿಸಿ ಅಧ್ಯಕ್ಷರಾಗಿ ಚುನಾಯಿತರಾದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರದೇಶ ಕಾಂಗ್ರೆಸ್ ಅಭಿನಂಧಿಸಿದೆ.
ಮಲ್ಲಿಕಾರ್ಜುನ್ ಖರ್ಗೆ ಅವರ ಸುದೀರ್ಘ ರಾಜಕೀಯ ಅನುಭವ, ಅಧ್ಯಯನ, ಜ್ಞಾನ, ಬದ್ಧತೆಗಳು ಕಾಂಗ್ರೆಸ್ ಪಕ್ಷವನ್ನು ಸೈದ್ದಂತಿಕವಾಗಿ ಹಾಗೂ ರಾಜಕೀಯವಾಗಿ ಇನ್ನಷ್ಟು ಗಟ್ಟಿಯಾಗಿ ಕಟ್ಟುವಲ್ಲಿ ಸಹಕಾರಿಯಾಗಲಿದೆ ಎಂದು ಪ್ರದೇಶ ಕಾಂಗ್ರೆಸ್ ಪಕ್ಷ ಟ್ವೀಟ್ ಮಾಡಿದೆ.
ಎಐಸಿಸಿ ಅಧ್ಯಕ್ಷರಾಗಿ ಚುನಾಯಿತರಾದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಶ್ರೀ @kharge ಅವರಿಗೆ ಅಭಿನಂದನೆಗಳು.
ಮಲ್ಲಿಕಾರ್ಜುನ್ ಖರ್ಗೆ ಅವರ ಸುದೀರ್ಘ ರಾಜಕೀಯ ಅನುಭವ, ಅಧ್ಯಯನ, ಜ್ಞಾನ, ಬದ್ಧತೆಗಳು ಕಾಂಗ್ರೆಸ್ ಪಕ್ಷವನ್ನು ಸೈದ್ದಂತಿಕವಾಗಿ ಹಾಗೂ ರಾಜಕೀಯವಾಗಿ ಇನ್ನಷ್ಟು ಗಟ್ಟಿಯಾಗಿ ಕಟ್ಟುವಲ್ಲಿ ಸಹಕಾರಿಯಾಗಲಿದೆ. pic.twitter.com/2qwajkALGi
— Karnataka Congress (@INCKarnataka) October 19, 2022
ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಕರುನಾಡಿಗೆ ಹೆಮ್ಮೆಯ ವಿಷಯ ಎಂದು ಕೆಪಿಸಿಸಿ ನಾಯಕರು ಸಂತಸ ಹಂಚಿಕೊಂಡಿದ್ದಾರೆ. ಖರ್ಗೆಯವರಿಗೆ ಅಭಿನಂದನೆಗಳ ಹೂಮಳೆಯಾಗುತ್ತಿದೆ.
ಎಐಸಿಸಿ ನೂತನವಾಗಿ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸನ್ಮಾನ್ಯ ಶ್ರೀ Mallikarjun Kharge ಅವರಿಗೆ ಹಾರ್ದಿಕ ಶುಭಾಶಯಗಳು 💐
@kharge @PriyankKharge pic.twitter.com/bvTJlDPGpD— Veena Kashappanavar (@VVKashappanavar) October 19, 2022
























































