ದೆಹಲಿ: ಎಐಸಿಸಿ ಅಧ್ಯಕ್ಷರಾಗಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷಗಾದಿಗಾಗಿ ನಡೆದ ಚುನಾವಣೆಯಲ್ಲಿ ಖರ್ಗೆ ಜಯಗಳಿಸಿದ್ದಾರೆ. ಹಿರಿಯ ಮುಖಂಡ ಶಶಿ ತರೂರ್ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಅಖಾಡದಲ್ಲಿದ್ದರು. ಗಾಂಧಿ ಕುಟುಂಬ ಬೆಂಬಲಿಯ ಅಭ್ಯರ್ಥಿ ಎಂದೇ ಗುರುತಿಸಲ್ಪಟ್ಟಿದ್ದ ಮಲ್ಲಿಕಾರ್ಜುನ ಖರ್ಗೆ ಅವರು ನಿರೀಕ್ಷೆಯಂತೆ ಚುನಾಯಿತರಾಗಿದ್ದಾರೆ.
ಇದೇ ವೇಳೆ, ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ದೇವೇಗೌಡರು ಅಭಿನಂದನೆ ಸಲ್ಲಿಸಿದ್ದರೆ.
I heartily congratulate my friend and colleague of many decades, Mallikarjun @kharge, on being elected @INCIndia President. This is a proud and historic moment for the Congress and also Karnataka. May God give him the strength to take his party to new heights across India. pic.twitter.com/mxTAVu5PHU
— H D Deve Gowda (@H_D_Devegowda) October 19, 2022
ಮಲ್ಲಿಕಾರ್ಜುನ ಖರ್ಗೆಯವರ ಆಯ್ಕೆ ಬಗ್ಗೆ ಜೆಡಿಎಸ್ ನಾಯಕ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕೂಡಾ ಸಂತಸ ವ್ಯಕ್ತಪಡಿಸಿದ್ದಾರೆ. ಖರ್ಗೆ ಅವರದ್ದು ಸುದೀರ್ಘ ರಾಜಕೀಯ ಅನುಭವ. ಅಚಲವಾದ ಪಕ್ಷನಿಷ್ಠೆ ಅವರನ್ನು ಈ ಉನ್ನತ ಹುದ್ದೆವರೆಗೂ ತಂದಿದೆ ಎಂದು ಬಣ್ಣಿಸಿರುವ ಕುಮಾರಸ್ವಾಮಿ, ಖರ್ಗೆ ಅವರಿಂದ ಆ ಪಕ್ಷಕ್ಕೆ ಒಳ್ಳೆಯದಾಗಲಿ ಎಂದು ಹಾರೈಸಿದ್ದಾರೆ.
ಎಐಸಿಸಿ ಅಧ್ಯಕ್ಷರಾಗಿ ಚುನಾಯಿತರಾದ ರಾಜ್ಯದ ಹಿರಿಯ ರಾಜಕಾರಣಿ, ಕಾಂಗ್ರೆಸ್ ಪಕ್ಷದ ಹಿರಿಯರಾದ ಶ್ರೀ @kharge ಅವರಿಗೆ ಅಭಿನಂದನೆಗಳು.
ಶ್ರೀ ಖರ್ಗೆ ಅವರದ್ದು ಸುದೀರ್ಘ ರಾಜಕೀಯ ಅನುಭವ. ಅಚಲವಾದ ಪಕ್ಷನಿಷ್ಠೆ ಅವರನ್ನು ಈ ಉನ್ನತ ಹುದ್ದೆವರೆಗೂ ತಂದಿದೆ.
ಶ್ರೀ ಖರ್ಗೆ ಅವರಿಂದ ಆ ಪಕ್ಷಕ್ಕೆ ಒಳ್ಳೆಯದಾಗಲಿ ಎಂದು ಹಾರೈಸುತ್ತೇನೆ. pic.twitter.com/slHVyKp4qn— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 19, 2022
























































