ದೆಹಲಿ: ಎಐಸಿಸಿ ಅಧ್ಯಕ್ಷರಾಗಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗುತ್ತಿದ್ದಂತೆಯೇ ಕೈ ಪಾಳಯದಲ್ಲಿ ಬದಲಾವಣೆಯ ನಿರೀಕ್ಷೆ ಹೆಚ್ಚಾಗಿದೆ.
ಕಾಂಗ್ರೆಸ್ ಪಕ್ಷದ ಅತ್ಯಂತ ಹಿರಿಯ ವಯಸ್ಸಿನ ಹಾಗೂ ಮುತ್ಸದ್ದಿ ರಾಜಕಾರಣಿಯು ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಲಿದ್ದು, ಬಹುಕಾಲದ ನಂತರ ಗಾಂಧಿ ಕುಟುಂಬದಿಂದ ಹೊರಗಿನವರು ಪಕ್ಷದ ಅಧ್ಯಕ್ಷರಾಗುತ್ತಿದ್ದಾರೆ.
ಬುಧವಾರ ಮಲ್ಲಿಕಾರ್ಜುನ ಖರ್ಗೆ ಅವರ ಆಯ್ಕೆಯನ್ನು ಪ್ರಕಟಿಸಲಾಗಿದೆ. ನೂತನ ಅಧ್ಯಕ್ಷರ ಪದಗ್ರಹಹಣಕ್ಕೆ ತಯಾರಿ ನಡೆದಿದೆ. ಕಾಂಗ್ರೆಸ್ ಮೂಲಗಳ ಪ್ರಕಾರ ಅಕ್ಟೋಬರ್ 26ರಂದು ವರ್ಗದ ಮಲ್ಲಿಕಾರ್ಜುನ ಖರ್ಗೆಯವರಿಗೆ ಎಐಸಿಸಿ ಅಧ್ಯಕ್ಷ ಹುದ್ದೆಯ ಹಸ್ತಾಂತರ ಕಾರ್ಯಕ್ರಮ ನಡೆಯಲಿದೆ.
ಕಾಂಗ್ರೆಸ್ ಅಧ್ಯಕ್ಷಗಾದಿಗಾಗಿ ನಡೆದ ಚುನಾವಣೆಯಲ್ಲಿ ಹಿರಿಯ ಮುಖಂಡ ಶಶಿ ತರೂರ್ ಹಾಗೂ ಮಲ್ಲಿಕಾರ್ಜುನ ಖರ್ಗೆ ನಡುವೆ ಸ್ಪರ್ಧೆ ಏರ್ಪಟ್ಟಿತ್ತು. ಗಾಂಧಿ ಕುಟುಂಬ ಬೆಂಬಲಿಗ ಅಭ್ಯರ್ಥಿ ಎಂದೇ ಗುರುತಿಸಲ್ಪಟ್ಟಿದ್ದ ಮಲ್ಲಿಕಾರ್ಜುನ ಖರ್ಗೆ ಅವರು ನಿರೀಕ್ಷೆಯಂತೆ ಚುನಾಯಿತರಾಗಿದ್ದಾರೆ.


















































