ದೆಹಲಿ: ರಾಷ್ಟ್ರೀಯ ಕಾಂಗ್ರೆಸ್‌ನ ಸಂಘಟನಾ ಸಮಿತಿಗಳನ್ನು ಶುಕ್ರವಾರ ಪುನಾರಚಿಸಲಾಗಿದೆ. ರಾಜ್ಯಸಭೆ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸದಸ್ಯರಾಗಿ ಮುಂದುವರಿದಿದ್ದಾರೆ.
ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಅವರನ್ನೂ ಸಿಡಬ್ಲ್ಯುಸಿ ಕಾಯಂ ಆಹ್ವಾನಿತರಾಗಿ ಮುಂದುವರಿದಿದ್ದಾರೆ. ಇವರ ಜೊತೆಗೆ ಕೆಪಿಸಿಸಿಯ ನಿಕಟಪೂರ್ವ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಮಾಜಿ ಸಚಿವ ಎಚ್.ಕೆ. ಪಾಟೀಲ್ ಅವರನ್ನು ಸಿಡಬ್ಲ್ಯುಸಿ ಕಾಯಂ ಆಹ್ವಾನಿತರ ಪಟ್ಟಿಗೆ ಹೊಸದಾಗಿ ಸೇರ್ಪಡೆ ಮಾಡಿದೆ.