ಬೆಂಗಳೂರು: ಕೋರಮಂಗಲದ ‘ಈಜಿಪುರ ಮೇಲ್ಸೇತುವೆ’ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸುವಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.
ತಾವು ಪ್ರತಿನಿಧುಸುತ್ತಿರುವ ಬೆಂಗಳೂರಿನ ಬಿಟಿಎಂ ವಿಧಾನಸಭಾ ಕ್ಷೇತ್ರದಲ್ಲಿ ಮೂಲ ಸೌಕರ್ಯ ಅಭಿವೃದ್ಧಿ ಸಂಬಂಧ ಅಧಿಕಾರಿಗಳೊಂದಿಗೆ ಚರ್ಚಿಸಿದ ಸಚಿವ ರಾಮಲಿಂಗಾ ರೆಡ್ಡಿ, ಕೋರಮಂಗಲದ ಈಜಿಪುರ ಮೇಲ್ಸೇತುವೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಸಾರ್ವಜನಿಕರ ಸೇವೆಗೆ ಅನುವು ಮಾಡಲು ಪ್ರತ್ಯೇಕ ಅಭಿಯಂತರರ ತಂಡ ರಚಿಸಲು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಿ.ಬಿ.ಎಂ.ಪಿ ಮುಖ್ಯ ಆಯುಕ್ತರ ಆದೇಶ ಹೊರಬಿದ್ದಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕೋರಮಂಗಲದ “ಈಜಿಪುರ ಮೇಲ್ವೇತುವ ಯೋಜನೆ’ ಕಾಮಗಾರಿಯನ್ನು ಪ್ರಸ್ತುತ ಯೋಜನೆ-ಕೇಂದ್ರ ವಿಭಾಗದಿಂದ ನಿರ್ವಹಿಸಲಾಗುತ್ತಿರುತ್ತದೆ. ಈಜಿಪುರ ಮೇಲ್ಸೇತುವೆ ಕಾಮಗಾರಿ ಯೋಜನೆಯನ್ನು ಸಾರ್ವಜನಿಕರ ಹಿತದೃಷ್ಟಿಯಿಂದ ಶೀಘ್ರವಾಗಿ ಪೂರ್ಣಗೊಳಿಸಿ ಅನುಷ್ಠಾನಗೊಳಿಸಬೇಕೆಂದು ಸಚಿವರು ಸೂಚನೆ ನೀಡಿದ ಹಿನ್ನೆಲೆಯಲ್ಲಿ ಬಿ.ಬಿ.ಎಂ.ಪಿ ಯ ಮುಖ್ಯ ಆಯುಕ್ತರು, ಇನ್ನು ಮುಂದೆ ಕೇಂದ್ರ ಕಚೇರಿಯ ಗುಣನಿಯಂತ್ರಣ / ಗುಣಭರವಸೆ ವಿಭಾಗದಿಂದ “ಈಜಿಪುರ ಮೇಲೇತುವೆ ಯೋಜನೆ ಕಾಮಗಾರಿಯನ್ನು ಅನುಷ್ಠಾನಗೊಳಿಸಲು ಆದೇಶ ಹೊರಡಿಸಿದ್ದಾರೆ.
‘ಈಜಿಪುರ ಮೇಲೇತುವೆ ಯೋಜನೆ’ ಕಾಮಗಾರಿ ಪೂರ್ಣಗೊಳ್ಳುವವರೆಗೆ ಮುಖ್ಯ ಅಭಿಯಂತರರು (ಗುಣನಿಯಂತ್ರಣ / ಗುಣಭರವಸೆ) ಡಾ. ರಾಘವೇಂದ್ರ ಪ್ರಸಾದ್ ಬಿ. ಜಿ.ರವರ ಅಧೀನದಲ್ಲಿ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲು ಇಂಜಿನಿಯರುಗಳನ್ನು ನೇಮಿಸಿ ಆದೇಶಿಸಲಾಗಿದೆ.
ಕಾರ್ಯಪಾಲಕ ಅಭಿಯಂತರರು (ಯೋಜನೆ-ಕೇಂದ್ರ/1) ಎನ್. ಚಂದ್ರಶೇಖರ್, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಸಂದೇಶ್ ಶೆಟ್ಟಿ, ರಂಜಿತ್ ಜೆ. ಎಲ್., ಅವರ ಬಳಿ ಹಾಜರಾತಿ ಸಲ್ಲಿಸಿ, ‘ಈಜಿಪುರ ಮೇಲ್ವೇತುವೆ ಯೋಜನೆ” ಕಾಮಗಾರಿಯನ್ನು ತ್ವರಿತವಾಗಿ ಅನುಷ್ಠಾನಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.