ಬೆಂಗಳೂರು: ಕೆ.ಜಿ.ಹಳ್ಳಿ ಗಲಭೆ ಪ್ರಕರಣದಲ್ಲಿ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ರನ್ನು ಬಂಧಿಸಿರುವ ಸಿಸಿಬಿ ಪೊಲೀಸರ ಕಾರ್ಯಾಚರಣೆ ಬಗ್ಗೆ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಸಂತಸ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ನಾಯಕ ಸಂಪತ್ ರಾಜ್ ಬಂಧನ ಕುರಿತಂತೆ ಪ್ರತಿಕ್ರಿಸಿರುವ ಕಾಂಗ್ರಸ್ ಶಾಸಕರೂ ಆದ ಅಖಂಡ ಶ್ರೀನಿವಾಸ ಮೂರ್ತಿ, ತಪ್ಪು ಮಾಡಿಲ್ಲ ಎಂದಾದರೆ ಸಂಪತ್ ರಾಜ್ ಇಷ್ಟು ದಿನ ತಲೆ ಮರೆಸಿಕೊಳ್ಳುವ ಅಗತ್ಯವೇನಿತ್ತು ಎಂದು ಪ್ರಶ್ನಿಸಿದ್ದಾರೆ.
ಗಲಭೆಯಲ್ಲಿ ತಮ್ಮ ಮನೆಗೆ ಬೆಂಕಿ ಇಡಲಾಗಿತ್ತು. ಆ ಸಂದರ್ಭದಲ್ಲಿ ನನಗೆ ನ್ಯಾಯ ದೊರಕಿಸಿಕೊಡುವುದಾಗಿ ಹೇಳಿದ್ದ ಡಿಕೆಶಿ ಮರೆತಿದ್ದಾರೆ ಎಂದು ಶ್ರೀನಿವಾಸ ಮೂರ್ತಿ ಬೇಸರ ವ್ಯಕ್ತಪಡಿಸಿದ್ದಾರೆ.