ಬೆಂಗಳೂರು: ಹಿಂದೂಯೇತರ ಸಮುದಾಯಗಳಿಗೆ ಹಿಂದೂ ದೇವಸ್ಥಾನಗಳ ಹಣವನ್ನು ಬಳಸಲಾಗುತ್ತದೆ ಮತ್ತು ಹಿಂದೂ ದೇವಸ್ಥಾನಗಳ ಮೇಲೆ ಅನ್ಯಾಯಯುತ ತೆರಿಗೆ ಹಾಕಲಾಗುತ್ತಿದೆ ಎನ್ನುವ
ಬಿಜೆಪಿ ನಾಯಕರ ಆರೋಪ ಸಂಪೂರ್ಣ ಕಪೋಲಕಲ್ಪಿತವಾಗಿದ್ದು ಅಮಾಯಕ ಹಿಂದೂಗಳನ್ನು ನಮ್ಮ ಸರ್ಕಾರದ ವಿರುದ್ದ ಎತ್ತಿಕಟ್ಟುವ ದುರುದ್ದೇಶದಿಂದ ಬಿಜೆಪಿ ನಾಯಕರು ಇಂತಹ ಕ್ಷುಲಕ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎದಿರೇಟು ನೀಡಿದ್ದಾರೆ.
ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಅವರು, ದೇವಸ್ಥಾನಗಳ ಹುಂಡಿಗಳಲ್ಲಿ ಸಂಗ್ರಹವಾಗುವ ಹಣವನ್ನು ಹಿಂದೂ ಧರ್ಮದ ಧಾರ್ಮಿಕ ಆಚರಣೆಗಳಿಗೆ ಸಂಬಂಧಪಟ್ಟಂತೆ ಮಾತ್ರವೇ ಬಳಸಲಾಗುತ್ತದೆ. ಈ ನಿಧಿಯು 2003ರಲ್ಲಿ ಕಾಯಿದೆಯು ಜಾರಿಗೆ ಬಂದಾಗಿನಿಂದ ಧಾರ್ಮಿಕ ಕಾರ್ಯಗಳಿಗೆ ಮಾತ್ರವೇ ಬಳಕೆಯಾಗುತ್ತಿದ್ದು ಭವಿಷ್ಯದಲ್ಲಿಯೂ ಅದಕ್ಕೆ ಮಾತ್ರವೇ ಬಳಕೆಯಾಗಲಿದೆ. ಬೇರೆ ಯಾವುದೇ ಧರ್ಮದ ಜನರ ಅನುಕೂಲಕ್ಕಾಗಿ ಈ ಹಣವನ್ನು ಬಳಸಲಾಗುವುದಿಲ್ಲ. ದೇವಸ್ಥಾನಗಳ ಹಣವನ್ನು ಕೇವಲ ಹಿಂದೂ ಸಮುದಾಯದ ಏಳಿಗೆ ಮತ್ತು ಕಲ್ಯಾಣಕ್ಕೆ ಮಾತ್ರವೇ ಬಳಸಬೇಕೆನ್ನುವ ಬಾಧ್ಯತೆಯನ್ನು ಈ ನಿಧಿಯ ನಿಬಂಧನೆಗಳಲ್ಲಿ ಒತ್ತಿ ಹೇಳಲಾಗಿದೆ. ಬಂಧನೆಗಳಲ್ಲಿ ಒತ್ತಿ ಹೇಳಲಾಗಿದೆ ಎಂದಿದ್ದಾರೆ.
ವಿಧಾನಸಭೆಯಲ್ಲಿ ಅಂಗೀಕರಿಸಲಾದ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕವನ್ನು ರಾಜಕೀಯ ಕಾರಣಗಳಿಗಾಗಿ ತಪ್ಪಾಗಿ ಜನತೆಯ ಮುಂದಿರಿಸುವ ಪ್ರಯತ್ನವನ್ನು ಬಿಜೆಪಿ ಇಂದು ಮಾಡುತ್ತಿದೆ ಎಂದಿರುವ ಅವರು, 1997ರಲ್ಲಿ ಕಾಯಿದೆಯನ್ನು ಜಾರಿಗೊಳಿಸಿದಾಗಿನಿಂದಲೂ ಸಾಮಾನ್ಯ ಸಂಗ್ರಹಣಾ ನಿಧಿಯನ್ನು ಸೃಜಿಸಬೇಕು ಎನ್ನುವ ನಿಬಂಧನೆ ಕಾಯಿದೆಯಲ್ಲಿಯೇ ಅಡಕವಾಗಿದೆ. ಹೀಗಿದ್ದರೂ ಸಾಮಾನ್ಯ ಸಂಗ್ರಹಣಾ ನಿಧಿಯ ನಿಯಮಾವಳಿಗಳಲ್ಲಿ ಅಡಕವಾಗಿರುವ ಅಂಶಗಳಿಗೆ ವಿರುದ್ಧವಾಗಿ ಇಂತಹ ಆಪಾದನೆಗಳನ್ನು ಮಾಡಲಾಗುತ್ತಿದೆ ಎಂದು ದೂರಿದ್ದಾರೆ.
ಪ್ರಸ್ತುತ ತಿದ್ದುಪಡಿಗೂ ಮುನ್ನ ಈ ನಿಧಿಗೆ ಹಣವು ಈ ಕೆಳಗಿನ ಮಾರ್ಗಗಳಿಂದ ಬರುತ್ತಿತ್ತು:
- ನಿವ್ವಳ ಆದಾಯ ಹತ್ತು ಲಕ್ಷ ರೂ. ಮೀರುವ ದೇವಸ್ಥಾನಗಳ ಒಟ್ಟು ವಾರ್ಷಿಕ ಆದಾಯದಿಂದ ಶೇ.10;
- ನಿವ್ವಳ ವಾರ್ಷಿಕ ಆದಾಯ ಐದು ಲಕ್ಷ ರೂ. ಗಿಂತ ಹೆಚ್ಚಿದ್ದು ಹತ್ತು ಲಕ್ಷ ರೂ. ಮೀರದ ದೇವಸ್ಥಾನಗಳ ವಾರ್ಷಿಕ ಆದಾಯದಿಂದ ಶೇ.5; ಹಾಗೂ
- ರಾಜ್ಯ ಸರ್ಕಾರದಿಂದ ದೊರೆಯುತ್ತಿದ್ದ ಅನುದಾನ.
ತಿದ್ದುಪಡಿಯ ನಂತರ ಸಾಮಾನ್ಯ ಸಂಗ್ರಹಣಾ ನಿಧಿಗೆ ಹಣವು ಇದೇ ಮೂಲದಿಂದ ಬರಲಿದೆ:
- ಒಂದು ಕೋಟಿ ರೂ. ನಿವ್ವಳ ಆದಾಯ ಮೀರುವ ದೇವಸ್ಥಾನಗಳ ಒಟ್ಟು ವಾರ್ಷಿಕ ಆದಾಯದಿಂದ ಶೇ. 10;
- ಹತ್ತು ಲಕ್ಷ ರೂ ನಿವ್ವಳ ಆದಾಯಕ್ಕಿಂತ ಹೆಚ್ಚಿದ್ದು ರೂ. 1 ಕೋಟಿ ಮೀರದ ಸಂಸ್ಥೆಗಳಿಂದ ಶೇ.5 ಹಾಗೂ
- ರಾಜ್ಯ ಸರ್ಕಾರದಿಂದ ದೊರೆಯುವ ಅನುದಾನ.
ನೂತನ ತಿದ್ದುಪಡಿಯನ್ನು ಸಾಮಾನ್ಯ ಸಂಗ್ರಹಣಾ ನಿಧಿಯನ್ನು ಹೆಚ್ಚಿಸುವ ಏಕೈಕ ಉದ್ದೇಶದಿಂದ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಪ್ರಸ್ತುತ ತಿದ್ದುಪಡಿಗೂ ಮುನ್ನ ಈ ನಿಧಿಗೆ ಹಣವು ಈ ಕೆಳಗಿನ ಮಾರ್ಗಗಳಿಂದ ಬರುತ್ತಿತ್ತು:
(1). ನಿವ್ವಳ ಆದಾಯ ಹತ್ತು ಲಕ್ಷ ರೂ. ಮೀರುವ ದೇವಸ್ಥಾನಗಳ ಒಟ್ಟು ವಾರ್ಷಿಕ ಆದಾಯದಿಂದ ಶೇ.10;
(2) ನಿವ್ವಳ ವಾರ್ಷಿಕ ಆದಾಯ ಐದು ಲಕ್ಷ ರೂ. ಗಿಂತ ಹೆಚ್ಚಿದ್ದು ಹತ್ತು ಲಕ್ಷ ರೂ. ಮೀರದ ದೇವಸ್ಥಾನಗಳ ವಾರ್ಷಿಕ ಆದಾಯದಿಂದ ಶೇ.5; ಹಾಗೂ
(3) ರಾಜ್ಯ… pic.twitter.com/nhRXG4yBzz— Siddaramaiah (@siddaramaiah) February 22, 2024
ಚುನಾವಣಾ ದೃಷ್ಟಿಯಿಂದ ಕೇವಲ ಕೋಮು ಧ್ರುವೀಕರಣದತ್ತಲೇ ಗಮನಹರಿಸುತ್ತಿರುವ ಬಿಜೆಪಿ ನಾಯಕರು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಸಲುವಾಗಿ ಸಮಾಜದಲ್ಲಿನ ಶಾಂತಿ, ಸಾಮರಸ್ಯವನ್ನು ಕದಡಲು ಇಂತಹ ಆಧಾರ ರಹಿತ ಆರೋಪಗಳನ್ನು ಮಾಡುತ್ತಿದ್ದಾರೆ. ಸಾಮಾಜಿಕ ಸ್ವಾಸ್ಥ್ಯವನ್ನು ಹಾಳು ಮಾಡುವಂತಹ ಅನೈತಿಕ ಹಾದಿ ತುಳಿದಿರುವ ಬಿಜೆಪಿ ನಾಯಕರು ತಮ್ಮ ಸಾರ್ವಜನಿಕ ವರ್ತನೆಗೆ ತಾವೇ ನಾಚಿಕೆಪಡಬೇಕಿದೆ ಎಂದಿರುವ ಸಿದ್ದರಾಮಯ್ಯ, ಕರ್ನಾಟಕದ ಸಾಮರಸ್ಯವನ್ನು ಕದಡುವ ದ್ರೋಹದ ಕೆಲಸವನ್ನು ಬಿಜೆಪಿ ನಾಯಕರು ಮಾಡುತ್ತಿದ್ದು ಇವರ ಈ ಸಂಚನ್ನು ಕನ್ನಡಿಗರು ನಿಷ್ಕ್ರಿಯಗೊಳಿಸಬೇಕಿದೆ ಎಂದು ಪ್ರತಿಪಾದಿಸಿದ್ದಾರೆ.
ಚುನಾವಣಾ ದೃಷ್ಟಿಯಿಂದ ಕೇವಲ ಕೋಮು ಧ್ರುವೀಕರಣದತ್ತಲೇ ಗಮನಹರಿಸುತ್ತಿರುವ @BJP4Karnataka ನಾಯಕರು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಸಲುವಾಗಿ ಸಮಾಜದಲ್ಲಿನ ಶಾಂತಿ, ಸಾಮರಸ್ಯವನ್ನು ಕದಡಲು ಇಂತಹ ಆಧಾರ ರಹಿತ ಆರೋಪಗಳನ್ನು ಮಾಡುತ್ತಿದ್ದಾರೆ. ಸಾಮಾಜಿಕ ಸ್ವಾಸ್ಥ್ಯವನ್ನು ಹಾಳು ಮಾಡುವಂತಹ ಅನೈತಿಕ ಹಾದಿ ತುಳಿದಿರುವ ಬಿಜೆಪಿ ನಾಯಕರು ತಮ್ಮ… pic.twitter.com/gsoIfCJOw0
— Siddaramaiah (@siddaramaiah) February 22, 2024



















































