ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ರಾಜ್ಯಸಭಾ ಚುನಾವಣೆ ಗೊಂದಲದ ಸನ್ನಿವೇಶಕ್ಕೂ ಸಾಕ್ಷಿಯಾಯಿತು. ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಮಂಗಳವಾರ ಸಂಜೆ ಪ್ರಕಟವಾಗುತ್ತಿದ್ದಂತೆಯೇ ದೇಶ ದ್ರೋಹದ ಘಷಣೆ ಮೊಳಗಿದೆ ಎಂಬ ಆರೋಪವೂ ಪ್ರತಿಧ್ವನಿಸಿದೆ.
ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಗೆಲುವು ಸಾಧಿಸುತ್ತಿದ್ದಂತೆಯೇ ಅವರ ಬೆಂಬಲಿಗರು ವಿಜಯೋತ್ಸವ ಆಚರಿಸಿದರು. ಆ ವೇಳೆ ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಮೊಳಗಿದೆ ಎಂಬ ಆರೋಪ ಕೇಳಿಬಂದಿದೆ. ವಿಧಾನಸೌಧದಲ್ಲಿ ನಡೆದ ಸನ್ನಿವೇಶ ಇಂತಹ ಆರೋಪಕ್ಕೆ ಕಾರಣವಾಗಿದೆ.
ಈ ಕುರಿತ ವೀಡಿಯೋ ವೈರಲ್ ಆಗುತ್ತಿದ್ದಂತೆಯೇ ರಾಜ್ಯಾದ್ಯಂತ ಪ್ರತಿಭಟನೆಗಳು ಭುಗಿಲೆದ್ದವು. ಬೆಂಗಳೂರಿನಲ್ಲೂ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿ ಪಾಕ್ ಪರ ಘೋಷಣೆ ಕೂಗಿದವರನ್ನು ಬಂಧಿಸಬೇಕು ಹಾಗೂ ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಇದೇ ವೇಳೆ, ಪ್ರತಿಪಕ್ಷಗಳ ಮುಖ್ಯ ಸಚೇತಕರಾದ ದೊಡ್ಡನಗೌಡ ಪಾಟೀಲ್, ಎನ್. ರವಿಕುಮಾರ್, ಶಾಸಕರಾದ ಡಾ. ಭರತ್ ಶೆಟ್ಟಿ, ಹರೀಶ್ ಪೂಂಜ, ಜ್ಯೋತಿ ಗಣೇಶ್ ಅವರನ್ನೊಳಗೊಂಡ ಬಿಜೆಪಿ ನಿಯೋಗ ವಿಧಾನಸೌಧ ಪೊಲೀಸ್ ಠಾಣೆಗೆ ತೆರಳಿ ತಪ್ಪಿತಸ್ಥರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಇದೇ ವೇಳೆ, ನಾಸಿರ್ ಹುಸೇನ್ ಬೆಂಬಲಿಗರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ಯುವ ಮೋರ್ಚಾ ರಾಜ್ಯ ಅಧ್ಯಕ್ಷರಾದ ಧೀರಜ್ ಮುನಿರಾಜು, ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಪೂಂಜಾ ಸೇರಿದಂತೆ ಅನೇಕ ಮುಖಂಡರು ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.
ನಾಸಿರ್ ಹುಸೇನ್ ಬೆಂಬಲಿಗರು ವಿಧಾನಸೌಧದಲ್ಲಿ ಪಾಕಿಸ್ಥಾನ ಪರ ಘೋಷಣೆ ಕೂಗಿದ್ದನ್ನು ಖಂಡಿಸಿ ಹಾಗೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ @NSNandiesha, ಯುವ ಮೋರ್ಚಾ ರಾಜ್ಯ ಅಧ್ಯಕ್ಷರಾದ ಶ್ರೀ ಧೀರಜ್ ಮುನಿರಾಜು, ಯುವ… pic.twitter.com/Px7SD4hxoI
— BJP Karnataka (@BJP4Karnataka) February 27, 2024