ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ರಾಜ್ಯಸಭಾ ಚುನಾವಣೆ ಗೊಂದಲದ ಸನ್ನಿವೇಶಕ್ಕೂ ಸಾಕ್ಷಿಯಾಯಿತು. ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಮಂಗಳವಾರ ಸಂಜೆ ಪ್ರಕಟವಾಗುತ್ತಿದ್ದಂತೆಯೇ ದೇಶ ದ್ರೋಹದ ಘಷಣೆ ಮೊಳಗಿದೆ ಎಂಬ ಆರೋಪವೂ ಪ್ರತಿಧ್ವನಿಸಿದೆ.
ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಗೆಲುವು ಸಾಧಿಸುತ್ತಿದ್ದಂತೆಯೇ ಅವರ ಬೆಂಬಲಿಗರು ವಿಜಯೋತ್ಸವ ಆಚರಿಸಿದರು. ಆ ವೇಳೆ ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಮೊಳಗಿದೆ ಎಂಬ ಆರೋಪ ಕೇಳಿಬಂದಿದೆ. ವಿಧಾನಸೌಧದಲ್ಲಿ ನಡೆದ ಸನ್ನಿವೇಶ ಇಂತಹ ಆರೋಪಕ್ಕೆ ಕಾರಣವಾಗಿದೆ.
ಈ ಕುರಿತ ವೀಡಿಯೋ ವೈರಲ್ ಆಗುತ್ತಿದ್ದಂತೆಯೇ ರಾಜ್ಯಾದ್ಯಂತ ಪ್ರತಿಭಟನೆಗಳು ಭುಗಿಲೆದ್ದವು. ತಕ್ಷಣ ಎಚ್ಛೆತ್ತುಕೊಂಡ ಬೆಂಗಳೂರಿನ ವಿಧಾನಸಯೋಧ ಠಾಣಾ ಪೊಲೀಸರು ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಆರೋಪಕ್ಕೆ ಸಂಬಂಧಿಸಿದಂತೆ ಸ್ವಯಂಪ್ರೇರಿತವಾಗಿ ಕೇಸ್ ದಾಖಲಿಸಿಕೊಂಡಿದ್ದಾರೆ. ಸಹಾಯಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಶಿವಕುಮಾರ್ ಅವರ ದೂರಿನ ಆಧಾರಲ್ಲಿ ಈ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.