ಬೆಂಗಳೂರು: ಗ್ಯಾರೆಂಟಿ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಇದೀಗ ಪೂರ್ಣ ಪ್ರಮಾಣದ ಸಂಪುಟದೊಂದಿಗೆ ರಾಜಭಾರ ಆರಂಭಿಸಿದೆ. ಆದರೆ ಖಾತೆ ಹಂಚಿಕೆ ಸಂದರ್ಭದಲ್ಲಿ ಕೆಲವು ಹಿರಿಯ ಸಚಿವರು ಮುನಿಸಿಕೊಂಡಿದ್ದಾರೆ. ಅದರಲ್ಲೂ ಸಾರಿಗೆ ಖಾತೆ ಸಿಗುವ ಸಾಧ್ಯತೆ ಹಿನ್ನೆಲೆಯಲ್ಲಿ ಸಚಿವ ರಾಮಲಿಂಗಾ ರೆಡ್ಡಿ ಅವರು ರಾಜೀನಾಮೆ ನೀಡಲು ಮುಂದಾಗಿದ್ದಾರೆಂಬ ಬೆಳವಣಿಗೆ ಸಿದ್ದು ಸರ್ಕಾರಕ್ಕೆ ಮುಜುಗರದ ಪರಿಸ್ಥಿತಿಯನ್ನು ತಂದೊಡ್ಡಿದೆ.
ತಮಗೆ ಸಾರಿಗೆ ಇಲಾಖೆಯನ್ನು ಹಂಚಿಕೆ ಮಾಡುವ ಸಿಎಂ ನಿರ್ಧಾರದ ಬಗ್ಗೆ ರಾಮಲಿಂಗಾ ರೆಡ್ಡಿ ಅವರು ಮುನಿಸಿಕೊಂಡಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಹಾಗೂ ಸಂಸದ ಡಿ.ಕೆ.ಸುರೇಶ್ ಅವರು ರಾಮಲಿಂಗಾ ರೆಡ್ಡಿ ಅವರ ಮನವೊಲಿಕೆಗೆ ಪ್ರಯತ್ನ ನಡೆಸಿದ್ದಾರೆ.
ಬೆಂಗಳೂರಿನ ಲಕ್ಕಸಂದ್ರ ಬಡಾವಣೆಯಲ್ಲಿರುವ ನಿವಾಸದಲ್ಲಿ ರಾಮಲಿಂಗರೆಡ್ಡಿ ಜೊತೆಗೆ ಡಿಕೆ ಸುರೇಶ್ ಸುದೀರ್ಘ ಮಾತುಕತೆ ನಡೆಸಿ, ಮನವೊಲಿಕೆಗೆ ಪ್ರಯತ್ನಿಸಿದರು. ಆದರೂ ರಾಮಲಿಂಗರೆಡ್ಡಿ ಸಮಾಧಾನಗೊಳ್ಳಲಿಲ್ಲ. ಯಾವುದಕ್ಕೂ ಕಾದು ನೋಡುವುದಾಗಿ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ ಎನ್ನಲಾಗಿದೆ.