ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇದೇ 23ರಂದು ಮತ್ತೊಮ್ಮೆ ಕರ್ನಾಟಕಕ್ಕೆ ಭೇಟಿ ಕೊಡಲಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಈ ತಿಂಗಳ 23ರಂದು ಅಮಿತ್ ಶಾ ಅವರು ಇದೇ 23ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ ಎಂದು ತಿಳಿಸಿದರು. ಅಂದು ಬೆಳಿಗ್ಗೆ ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಸಾರ್ವಜನಿಕ ಸಭೆ, ಪ್ರಮುಖರ ಸಭೆ, ಸಂಜೆ ಬೆಂಗಳೂರಿನಲ್ಲಿ ಪ್ರಬುದ್ಧರ ಸಭೆ ಹಾಗೂ ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ವಿವರಿಸಿದರು. ಬೆಂಗಳೂರಿನ ಸಚಿವರು, ಸಂಸದರು, ಶಾಸಕರು ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸುವರು ಎಂದು ತಿಳಿಸಿದರು.
























































