ಕರಾವಳಿ ಶಾಸಕ ಅಂಗಾರರಿಗೆ ಸಚಿವ ಸ್ಥಾನ ಪಿಕ್ಸ್..! ಕತ್ತಿ, ಶಂಕರ್‌ಗೂ ಸಿಎಂ ಕರೆ
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ಶಾಸಕ ಅಂಗಾರರಿಗೆ ಮಂತ್ರಿ ಸ್ಥಾನ ಸಿಗುವುದು ಖಚಿತ ಎಂಬ ಮಾತುಗಳು ಬಿಜೆಪಿ ಪಡಸಾಲೆಯಲ್ಲಿ ಕೇಳಿಬರುತ್ತಿದೆ.
6 ಬಾರಿ ಶಾಸಕರಾಗಿರುವ ಅಂಗಾರರಿಗೆ ಮುಖ್ಯಮಂತ್ರಿ ಯಡಿಯೂರಪ್ಪರವರೇ ಕರೆ ಮಾಡಿ ಬೆಂಗಳೂರಿನಲ್ಲಿರುವಂತೆ ತಿಳಿಸಿದ್ದಾರೆ.
ಇದೇ ವೇಳೆ. ಹುಕ್ಕೇರಿ ಶಾಸಕ ಉಮೇಶ್ ಕತ್ತಿ, ವಿಧಾನ ಪರಿಷತ್ ಸದಸ್ಯ ಆರ್.ಶಂಕರ್ ಅವರಿಗೂ ಯಡಿಯೂರಪ್ಪ ಕರೆ ಮಾಡಿ ಬೆಂಗಳೂರಿನಲ್ಲೇ ಇರುವಂತೆ ಸೂಚಿಸಿದ್ದಾರೆನ್ನಲಾಗಿದೆ.