ರಾಮನಗರ: ಶಾಸಕಿ ಅನಿತಾ ಕುಮಾರಸ್ವಾಮಿ ಇಂದು ತಮ್ಮ ಕ್ಷೇತ್ರ ವ್ಯಾಪ್ತಿಯ ಪ್ರಥಮ ದರ್ಜೆ ಕಾಲೇಜು ಹಾಗೂ ಇಂಜಿನಿಯರಿಂಗ್ ಕಾಲೇಜುಗಳಿಗೆ ಭೇಟಿ ನೀಡಿದರು. ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಒದಗಿಸಲಾಗಿರುವ ಟ್ಯಾಬ್ ವಿತರಣೆಗೆ ಚಾಲನೆ ನೀಡಿ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ ಮಾಡಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಕೊಡುವ ಎಲ್ಲಾ ಸೌಲಭ್ಯಗಳನ್ನು ವಿದ್ಯಾರ್ಥಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಚಾಲನೆ ಕೊಟ್ಟಿದ್ದೇನೆ. ಮೂರನೇ ಅಲೆಯ ಕರೋನಾ ನಿಯಂತ್ರಣ ಮಾಡುವುದಕ್ಕೆ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಅಧಿಕಾರಿಗಳ ಸಭೆಗಳನ್ನು ನಡೆಸುತ್ತೇನೆ. ನಿರಂತರವಾಗಿ ಅಧಿಕಾರಿಗಳ ಜತೆ ಸಂಪರ್ಕದಲ್ಲಿದ್ದೇನೆ ಎಂದರು.
ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ರಾಮನಗರದಲ್ಲಿ ಓಡಾಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಿಖಿಲ್ ಯುವ ಘಟಕದ ರಾಜ್ಯಾಧ್ಯಕ್ಷ ಎಲ್ಲಾ ಕಡೆಗಳಲ್ಲಿಯೂ ಪಕ್ಷ ಸಂಘಟನೆಗಾಗಿ ಓಡಾಡುತ್ತಿದ್ದಾರೆ. ಮಂಡ್ಯ ಕೋಲಾರ ಹೀಗೆ ಎಲ್ಲಾ ಕಡೆ ಓಡಾಡಿದ್ದಾರೆ. ನಮ್ಮ ಮಾವನ ಕಾಲದಿಂದಲೂ ರಾಮನಗರ ಕ್ಷೇತ್ರ ನಮ್ಮ ಕುಟುಂಬವನ್ನ ಬೆಳೆಸುತ್ತಾ ಬಂದಿದ್ದಾರೆ. ನಿಖಿಲ್ ಕುಮಾರಸ್ವಾಮಿ ಚಿಕ್ಕ ವಯಸ್ಸಿನಿಂದಲೂ ರಾಮನಗರ ಎಂದರೆ ಪ್ರೀತಿ ಅದಕ್ಕಾಗಿ ರಾಮನಗರಕ್ಕೆ ಹೆಚ್ಚು ಬರುತ್ತಿದ್ದಾರೆ ಎಂದು ಕ್ಷೇತ್ರದ ಜನರ ಮೇಲಿನ ಅಭಿಮಾನವನ್ನು ವ್ಯಕ್ತಪಡಿಸಿದರು.