ಕಲಬುರಗಿ: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನಡೆದ ಸಾವಿನ ದುರಂತದ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಂದು ಭೀಕರ ದುರಂತ ಸಂಭವಿಸಿದೆ. ಕಲಬುರಗಿ ಜಿಲ್ಲೆ ಅಫ್ಜಲ್‌ಪುರದ ಆಸ್ಪತ್ರೆಯಲ್ಲಿ ಸಕಾಲದಲ್ಲಿ ಆಮ್ಲಜನಕ ಸಿಗದೆ ನಾಲ್ವರು ರೋಗಿಗಳು ಸಾವನ್ನಪ್ಪಿದ್ದಾರೆ ಎಂಬ ಸುದ್ದಿ ಹರಿದಾಡಿದೆ.
ಅಫ್ಜಲ್ಪುರ ತಾಲೂಕು ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಈ ಆಸ್ಪತ್ರೆಯಲ್ಲಿ ಅನೇಕ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಂಜಾನೆಯಾಗುತ್ತಿದ್ದಂತೆಯೇ ಆಮ್ಲಜನಕ ಕೊರತೆ ಕಾಡಿದೆ ಎನ್ನಲಾಗಿದೆ. ಆಕ್ಸಿಜನ್ ಕೊರತೆಯಿಂದಾಗಿ ನಾಲ್ವರು ರೋಗಿಗಳು ಮೃತಪಟ್ಟಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.
ಈ ನಡುವೆ ಅನೇಕ ತಾಸುಗಳಿಂದ ಜೀವವಾಯುಗಾಗಿ ರೋಗಿಗಳು ಪರದಾಡುತ್ತಿದ್ದಾರೆ ಎನ್ಬಲಾಗುತ್ತಿದ್ದು, ರೋಗಿಗಳ ಬಂಧುಗಳ ಆಕ್ರಂದನವೂ ಮುಗಿಲು ಮುಟ್ಟಿದೆ.