ಬೆಂಗಳೂರು: ಪೆನ್ ಡ್ರೈವ್ ಕೇಸ್ನ ಸುಳಿಯಲ್ಲಿ ಸಿಲುಕಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಮತ್ತೊಂದು ಪ್ರಕರಣ ದಾಖಲಾಗಿದೆ.
ಹಾಸನ ಮೂಲದ ಮಹಿಳೆ ಬೆಂಗಳೂರಿನ ಸಿಐಡಿ ಕಚೇರಿಯಲ್ಲಿ ದೂರು ನೀಡಿದ್ದಾರೆ. ಸಂಸದ ಪ್ರಜ್ವಲ್ ರೇವಣ್ಣ ಅವರು ತಮ್ಮನ್ನು ಹಾಗೂ ತನ್ನ ಪತಿಯನ್ನು ಕೊಲೆ ಮಾಡುವುದಾಗಿ ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಖಾಸಗಿ ವೀಡಿಯೋ ಚಿತ್ರಿಸಿ ಬ್ಲಾಕ್ಮೇಲ್ ಮಾಡಿದ್ದಾರೆ ಎಂದು ಆ ಮಹಿಳೆ ದೂರಿದ್ದಾರೆ.
ದೂರನ್ನು ಸ್ವೀಕರಿಸಿರುವ ಪೊಲೀಸರು ಪ್ರಜ್ವಲ್ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.