ಬೆಂಗಳೂರು: ಆಂಧ್ರ ಪ್ರದೇಶದ ನೂತನ ರಾಜ್ಯಪಾಲರಾಗಿ ಸುಪ್ರೀಂ ಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಮತ್ತು ಕನ್ನಡಿಗ ಎಸ್.ಅಬ್ದುಲ್ ನಜೀರ್ ಅವರ ನೇಮಕವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಸ್ವಾಗತಿಸಿದ್ದಾರೆ. ಇದೇವೇಳೆ ಎಸ್.ಅಬ್ದುಲ್ ನಜೀರ್ ಅವರನ್ನು ಅಭಿನಂಧಿಸಿದ್ದಾರೆ.
ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರಾದ ಅವರು ಕರ್ನಾಟಕ ಹೈಕೋರ್ಟಿನ ನ್ಯಾಯಮೂರ್ತಿಯಾಗಿ ಕಾರ್ಯ ನಿರ್ವಹಿಸಿದ್ದು, ಸರಳತೆ ಮೂಲಕ ಗಮನ ಸೆಳೆದವರು. ಅಯೋಧ್ಯೆ ಶ್ರೀರಾಮಜನ್ಮಭೂಮಿ ಪ್ರಕರಣದಲ್ಲಿ ರಾಮಮಂದಿರದ ಪರವಾಗಿ ತೀರ್ಪು ಕೊಟ್ಟ ನ್ಯಾಯಪೀಠದಲ್ಲಿ ಮತ್ತು ತ್ರಿವಳಿ ತಲಾಖ್ ಅಸಿಂಧು ಎಂಬ ಐತಿಹಾಸಿಕ ತೀರ್ಪು ಕೊಟ್ಟ ನ್ಯಾಯಪೀಠದಲ್ಲಿ ಅವರೂ ಒಬ್ಬರಾಗಿದ್ದರು ಎಂದು ವಿವರಿಸಿದ್ದಾರೆ. ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿವಿಧ ರಾಜ್ಯಗಳಿಗೆ ಗವರ್ನರ್‍ಗಳು, ಲೆಫ್ಟಿನೆಂಟ್ ಗವರ್ನರ್ ನೇಮಕ ಮಾಡಿದ್ದನ್ನು ಅವರು ಸ್ವಾಗತಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕೂಡಾ ನ್ಯಾ.ನಸೀರ್ ಅಹ್ಮದ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ನೂತನವಾಗಿ ಆಂದ್ರ ಪ್ರದೇಶದ ರಾಜ್ಯಪಾಲರಾಗಿ ನಿಯುಕ್ತಿಗೊಂಡಿರುವ ಹೆಮ್ಮೆಯ ಕನ್ನಡಿಗ ಶ್ರೀ ಎಸ್. ಅಬ್ದುಲ್ ನಜೀರ್ ರವರಿಗೆ ಹಾರ್ದಿಕ ಅಭಿನಂದನೆಗಳು. ಮೂಲತಃ ಮಂಗಳೂರಿನ ಬೆಳುವಾಯಿಯವರಾದ ಇವರು ಕರ್ನಾಟಕದ ಉಚ್ಛ ನ್ಯಾಯಾಲಯದಲ್ಲಿ ವಕೀಲರಾಗಿ ಸೇವೆ ಸಲ್ಲಿಸಿ, ನಂತರ ಸುಪ್ರಿಂ ಕೋರ್ಟ್ ನಲ್ಲಿ ನ್ಯಾಯಾಧೀಶರಾಗಿ, ನಿವೃತ್ತರಾಗಿದ್ದರು. pic.twitter.com/kAcLOxxv8C
— Basavaraj S Bommai (Modi Ka Parivar) (@BSBommai) February 12, 2023