ಅರಸೀಕೆರೆ: ಧರ್ಮಸ್ಥಳಕ್ಕೆ ತೆರಳಿ, ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿ ಊರಿಗೆ ಮರಳುತ್ತಿದ್ದವರ ವಾಹನ ಅಪಘಾತಕ್ಕೀಡಾಗಿ 9 ಮಂದಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ಬಳಿ ಸಂಭವಿಸಿದೆ.
ಅರಸೀಕೆರೆ ತಾಲ್ಲೂಕಿನ ಗಾಂಧಿನಗರದಲ್ಲಿ ತಡರಾತ್ರಿ ಟೆಂಪೋ ಟ್ರಾವೆಲರ್, ಹಾಲಿನ ಲಾರಿ ಹಾಗೂ ಸಾರಿಗೆ ಸಂಸ್ಥೆಯ ಬಸ್ ನಡುವೆ ಸಂಭವಿಸಿದ ಈ ಭೀಕರ ಅಪಘಾತದಲ್ಲಿ 9 ಮಂದಿ ಸಾವನ್ನಪ್ಪಿ, ಹನ್ನೆರಡು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಹಳ್ಳಿಕೆರೆ ಗ್ರಾಮದ ಹದಿನಾಲ್ಕು ಮಂದಿ ಟಿಟಿ ವಾಹನದಲ್ಲಿ ಧರ್ಮಸ್ಥಳಕ್ಕೆ ತೆರಳಿ, ಅಲ್ಲಿಂದ ಹಾಸನಕ್ಕೆ ಭೇಟಿ ನೀಡಿ, ಹಾಸನಾಂಬೆ ದರ್ಶನ ಪಡೆದು ಗ್ರಾಮಕ್ಕೆ ತೆರಳುತ್ತಿದ್ದರು. ಊರು ಸಮೀಪಿಸುತ್ತಿರುವಾಗಲೇ ಇವರಿದ್ದ ವಾಹನ ಅಪಘಾತಕ್ಕೀಡಾಗಿದೆ.







































































