ಬೆಂಗಳೂರು ಜಿಟಿ ಮಾಲ್‌ನಲ್ಲಿ ಪಂಚೆಯಲ್ಲಿ ಬಂದ ರೈತನಿಗೆ ಪ್ರವೇಶ ಕೊಡದೆ ರೈತನಿಗೆ ಅಪಮಾನ ಮಾಡಿರುವುದು ಖಂಡನೀಯ. ರೈತರ ಅನ್ನ ತಿನ್ನುವ ಯಾರೇ ಆದರೂ ಇನ್ನು ಮುಂದೆ ಇಂಥ ನಡವಳಿಕೆ ತೋರಿಸಿದರೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಚ್ಚೆತ್ತುಕೊಳ್ಳಬೇಕು ಮುಖ್ಯಮಂತ್ರಿ ಸಿದ್ದರಾಮಯ್ಯ ಪಂಚೆಯಲ್ಲಿ ಬರುತ್ತಾರೆ ಅವರಿಗೂ ಪ್ರವೇಶ ನೀಡದೆ ನಿಲ್ಲಿಸುತ್ತಾರೆಯೇ?
ಇದು ರೈತ ಸಂಘಟನೆಗಳ ಒಕ್ಕೂಟದ ಮುಖಂಡ ಕುರುಬೂರು ಶಾಂತಕುಮಾರ್ ಅವರ ಆಕ್ರೋಶ. ಬೆಂಗಳೂರಿನ ಜಿ.ಟಿ.ಮಾಲ್‌ನಲ್ಲಿ ಲುಂಗಿ ಧರಿಸಿ ಬಂದ ರೈತನಿಗೆ ಪ್ರವೇಶ ನಿರಾಕರಿಸಿರುವ ಪ್ರಸಂಗದ ಬಗ್ಗೆ ಆಕ್ರೋಶ ಹೊರಹಾಕಿರುವ ಕುಬೂರು ಶಾಂತಕುಮಾರ್, ಮಾಲ್ ಮಾಲೀಕರು ಕೂಡಲೇ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.
ರಾಜ್ಯದ ರೈತರಿಗೆ ಮಾಡಿದ ಅಪಮಾನ
ರೈತನ ಅನ್ನ ತಿನ್ನುವ ರೈತ ಬೆಳೆದ ಹಣ್ಣು ತರಕಾರಿ ಧಾನ್ಯಗಳನ್ನು ಬೆಳೆಯನ್ನು ಮಾರಾಟ ಮಾಡುವ ಈ ಮಾಲ್ ಮಾಲೀಕ ಕೂಡಲೆ ಕ್ಷಮಾಪಣೆ ಕೇಳಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಿ.ಇಲ್ಲದಿದ್ದರೆ, ಸಾವಿರಾರು ರೈತರು ಬಾರ್‌ಕೋಲ್‌ಗಳೊಂದಿಗೆ ಚಡ್ಡಿಯಲ್ಲಿ ಮೆರವಣಿಗೆ ಮೂಲಕ ಮಾಲ್‌ಗೆ ಪ್ರವೇಶಿಸ ಬೇಕಾಗುತ್ತದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬುರ್ ಶಾಂತಕುಮಾರ್ ಪತ್ರಿಕಾ ಹೇಳಿಕೆಯಲ್ಲಿ ಎಚ್ಚರಿಸಿದ್ದಾರೆ.