ಬೆಂಗಳೂರು: ಚುನಾವಣಾ ಹೊತ್ತಿನಲ್ಲಿ ಬಿಜೆಪಿ ಕಾಂಗ್ರೆಸ್ ನಾಯಕರ ನಡುವೆ ವಾಕ್ಸಮರ ತೀವ್ರಗೊಂಡಿದೆ. ಅದರಲ್ಲೂ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ವಿಚಾರದಲ್ಲಿ ಸಚಿವ ದಿನೇಶ್ ಗುಂಡೂರಾವ್ ಮಾಡಿರುವ ಟ್ವೀಟ್ ಬಿಜೆಪಿ-ಕಾಂಗ್ರೆಸ್ ನಡುವಿನ ಕಾದಾಟಕ್ಕೆ ತುಪ್ಪ ಸುರಿದಂತಿದೆ.
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ಬಿಜೆಪಿ ಮುಖಂಡ ಸಾಯಿಪ್ರಸಾದ್‌ನನ್ನು ರಾಷ್ಟ್ರೀಯ ತನಿಖಾ ದಳದವರು ವಶಕ್ಕೆ ಪಡೆದಿದ್ದಾರೆ ಎಂದು ಟ್ವೀಟ್ ಮಾಡಿರುವ ಸಚಿವ ದಿನೇಶ್ ಗುಂಡೂರಾವ್, ಸ್ಫೋಟಕ್ಕೆ ನಮ್ಮ ಸರ್ಕಾರವೇ ಕಾರಣ ಅನ್ನೋವಂತೆ ಮಾತಾನಾಡುತ್ತಿದ್ದ ರಾಜ್ಯದ ಕೇಸರಿ ಕಲಿಗಳು ಈಗ ಏನು ಹೇಳುತ್ತಾರೆ? ಬಿಜೆಪಿ ಮುಖಂಡನನ್ನು NIA ವಶಕ್ಕೆ ಪಡೆದಿದೆ ಎಂದ ಮೇಲೆ ರಾಮೇಶ್ವರಂ ಕೆಫೆ ಸ್ಫೋಟದಲ್ಲಿ ಬಿಜೆಪಿ ಕೈವಾಡ ಇದೆ ಎಂದು ಅರ್ಥಅಲ್ಲವೇ? ಧರ್ಮ ರಕ್ಷಣೆ ಹೆಸರಲ್ಲಿ ರಾಜ್ಯದಲ್ಲಿ ಬಿಜೆಪಿ ನಡೆಸುತ್ತೀರೋ ಕೇಸರಿ ಭಯೋತ್ಪಾದನೆ ಎಷ್ಟು ಗಂಭೀರ ಸಮಸ್ಯೆಗಳನ್ನು ಹುಟ್ಟು ಹಾಕುತ್ತಿದೆ ಅನ್ನೋದಕ್ಕೆ ಇದಕ್ಕಿಂತಾ ಸಾಕ್ಷಿ ಬೇಕಾ? ಆರ್‌ಎಸ್‌ಎಸ್ ಸಿದ್ಧಾಂತಗಳನ್ನು ದೇಶದ ಮೇಲೆ ಹೇರುತ್ತಿರುವ ಕೇಂದ್ರ ಬಿಜೆಪಿಯು ಇದಕ್ಕೇನು ಹೇಳುತ್ತದೆ? ಎಂದು ಪ್ರಶ್ನಿಸಿದ್ದಾರೆ.
ರಾಷ್ಟ್ರದ ಭದ್ರತೆ ವಿಚಾರವನ್ನೂ ಲೆಕ್ಕಿಸದೇ ರಾಮೇಶ್ವರಂ ಬಾಂಬ್ ಸ್ಫೋಟ ಪ್ರಕರಣವನ್ನು ಕಾಂಗ್ರೆಸ್ ಸರ್ಕಾರದ ಮೇಲೆ ಹೊರೆಸಿದ ರಾಜ್ಯ ಬಿಜೆಪಿ ನಾಯಕರು ಈಗ ಉತ್ತರ ನೀಡಲೇ ಬೇಕು ಎಂದು ದಿನೇಶ್ ಗುಂಡೂರಾವ್ ಪೋಸ್ಟ್ ಹಾಕಿದ್ದಾರೆ.
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ಬಿಜೆಪಿ ಮುಖಂಡ ಸಾಯಿಪ್ರಸಾದ್‌ನನ್ನು ರಾಷ್ಟ್ರೀಯ ತನಿಖಾ ದಳದವರು ವಶಕ್ಕೆ ಪಡೆದಿದ್ದಾರೆ.
ಸ್ಫೋಟಕ್ಕೆ ನಮ್ಮ ಸರ್ಕಾರವೇ ಕಾರಣ ಅನ್ನೋವಂತೆ ಮಾತಾನಾಡುತ್ತಿದ್ದ ರಾಜ್ಯದ ಕೇಸರಿ ಕಲಿಗಳು ಈಗ ಏನು ಹೇಳುತ್ತಾರೆ? ಬಿಜೆಪಿ ಮುಖಂಡನನ್ನು NIA ವಶಕ್ಕೆ ಪಡೆದಿದೆ ಎಂದ ಮೇಲೆ… pic.twitter.com/gygIPjGuBK
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) April 5, 2024
ಈ ಪೋಸ್ಟ್ ಬಗ್ಗೆ ಕಿಡಿಕಾರಿರುವ ಬಿಜೆಪಿ, ದಿನೇಶ್ ಗುಂಡೂರಾವ್ ಅವರು ಆರೋಗ್ಯ ಸಚಿವರೋ ಅಥವಾ ಸುಳ್ಳು ಹೇಳುವ ಸಚಿವರೋ? ಎಂದು ಪಶ್ನಿಸಿದೆ.
ಸಚಿವ ದಿನೇಶ ಗುಂಡೂರಾವ್ ಅವರು ನಿಜಕ್ಕೂ ಅನಾರೋಗ್ಯಕ್ಕೆ ಒಳಗಾಗಿ ಮಾನಸಿಕ ಅಸ್ವಸ್ಥರಾಗಿದ್ದಾರೆ. ಕಾಂಗ್ರೆಸ್ ಐಟಿ ಸೆಲ್ ಹರಡುವ ಸುಳ್ಳು ಸುದ್ದಿಯನ್ನೇ ಸತ್ಯವೆಂದು ಬಿಂಬಿಸಲು ಹೊರಟಿದ್ದಾರೆ ಎಂದು ಪ್ರತಿಕ್ರಿಯಿಸಿರುವ ಬಿಜೆಪಿ, ‘ನೀವು ಆರೋಗ್ಯ ಸಚಿವರೋ ಅಥವಾ ಸುಳ್ಳು ಹೇಳುವ ಸಚಿವರೋ?’ ಎಂದು ಪ್ರಶ್ನಿಸಿದೆ. ಸಾಕ್ಷಿ ವಿಚಾರಣೆ, ಆರೋಪಿ ವಿಚಾರಣೆ ತಿಳಿಯದಷ್ಟು ಮೂರ್ಖರು ಸಚಿವ ಸ್ಥಾನದಲ್ಲಿ ಕೂತಿರುವುದು ದುರಂತ. ಕೂಡಲೇ ರಾಜ್ಯದ ಜನರ ಮುಂದೆ ಕ್ಷಮೆ ಕೇಳಿ ಮಾನ ಉಳಿಸಿಕೊಳ್ಳಿ ಎಂದು ಬಿಜೆಪಿ ಎದಿರೇಟು ನೀಡಿದೆ.
ಸಚಿವ @dineshgrao ನಿಜಕ್ಕೂ ಅನಾರೋಗ್ಯಕ್ಕೆ ಒಳಗಾಗಿ ಮಾನಸಿಕ ಅಸ್ವಸ್ಥರಾಗಿದ್ದಾರೆ. ಕಾಂಗ್ರೆಸ್ ಐಟಿ ಸೆಲ್ ಹರಡುವ ಸುಳ್ಳು ಸುದ್ದಿಯನ್ನೇ ಸತ್ಯವೆಂದು ಬಿಂಬಿಸಲು ಹೊರಟಿದ್ದಾರೆ.
ನೀವು ಆರೋಗ್ಯ ಸಚಿವರೋ ಅಥವಾ ಸುಳ್ಳು ಹೇಳುವ ಸಚಿವರೋ?
ಸಾಕ್ಷಿ ವಿಚಾರಣೆ, ಆರೋಪಿ ವಿಚಾರಣೆ ತಿಳಿಯದಷ್ಟು ಮೂರ್ಖರು ಸಚಿವ ಸ್ಥಾನದಲ್ಲಿ ಕೂತಿರುವುದು ದುರಂತ.… https://t.co/KQtw9UjTYV
— BJP Karnataka (@BJP4Karnataka) April 5, 2024