ನವದೆಹಲಿ: ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆಯ ನೇತಾರ ಜಗಜಿತ್ ಸಿಂಗ್ ಧಲೇವಾಲ ಮಧ್ಯರಾತ್ರಿ ಬಂಧನವಾಗಿದೆ. ಮಧ್ಯರಾತ್ರಿ ಎರಡು ಗಂಟೆ ಸುಮಾರಿಗೆ ಕನೋರಿ ಬಾರ್ಡರ್‌ನಲ್ಲಿ. ಹರಿಯಾಣ ಪೋಲೀಸರು ಬಂಧಿಸಿದ್ದಾರೆ.
ರೈತರ ಹಕ್ಕುಗಳಿಗಾಗಿ ರಾಷ್ಟ್ರೀಯ ಕಿಸಾನ್ ಮೋರ್ಚಾ ನೇತೃತ್ವದಲ್ಲಿ ಸುದೀರ್ಘ ಹೋರಾಟ ನಡೆಯುತ್ತಿದ್ದು ಇದೀಗ ಮತ್ತೊಂದು ಸುತ್ತಿನ ಸತ್ಯಾಗ್ರಹ ನಡೆದಿದೆ. ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದಾಗ ರೈತ ನಾಯಕರನ್ನು ಬಂಧಿಸಲಾಗಿದೆ. ಇದು ಖಂಡನೀಯ ಎಂದು ಭಾರತೀಯ ಕಿಸ್ಸಾನ್ ಮೋರ್ಚಾದ ಸಂಚಾಲಕರೂ ಆದ ಕರ್ನಾಟಕ ರಾಜ್ಯ ರೈತ ಸಂಘನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರೈತರು ಬಂಧನ ಖಂಡಿಸಿ ಬೀದಿಗಿಳಿದು ಹೋರಾಟ ಮಾಡುವ ಮೂಲಕ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಬೇಕು ಎಂದು ಕರೆ ಕೊಟ್ಟಿರುವ ಅವರು, ರೈತರ ಸಮಸ್ಯೆ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿ ಬಗೆಹರಿಸುವಂತೆ ರಾಷ್ಟ್ರಪತಿಗಳಿಗೆ ಆಯಾ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಸಂದೇಶ ರವಾನಿಸಲಾಗುವುದು ಎಂದು ತಿಳಿಸಿದ್ದಾರೆ.