ಬೆಂಗಳೂರು: ‘ಆಶಾ’ಗಳ ಪರವಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಧ್ವನಿ ಎತ್ತಿದ್ದಾರೆ. ಪ್ರಾಧ ಹಂಗು ತೊರೆದು ಕಾರ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಗೌರವಧನ ಬಿಡುಗಡೆ ಮಾಡಿ ಗೌರವ ಉಳಿಸುವಂತೆ ಸರ್ಕಾರಕ್ಕೆ ಅವರು ಸಲಹೆ ಮಾಡಿದ್ದಾರೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಕೋವಿಡ್ ನಿರ್ವಹಣೆಯಲ್ಲಿ ತಮ್ಮ ಪ್ರಾಣದ ಹಂಗು ತೊರೆದು ಹೋರಾಡುತ್ತಿರುವ ಆಶಾ ಕಾರ್ಯಕರ್ತೆಯರಿಗೆ ತಕ್ಷಣವೇ ರಾಜ್ಯ ಸರ್ಕಾರ ಬಾಕಿ ಇರುವ ಗೌರವಧನವನ್ನು ಬಿಡುಗಡೆ ಮಾಡಬೇಕು ಎಂದಿದ್ದಾರೆ.
ಕೋವಿಡ್ ನಿರ್ವಹಣೆಯಲ್ಲಿ ತಮ್ಮ ಪ್ರಾಣದ ಹಂಗು ತೊರೆದು ಹೋರಾಡುತ್ತಿರುವ ಆಶಾ ಕಾರ್ಯಕರ್ತೆಯರಿಗೆ ತಕ್ಷಣವೇ ರಾಜ್ಯ ಸರ್ಕಾರ ಬಾಕಿ ಇರುವ ಗೌರವಧನವನ್ನು ಬಿಡುಗಡೆ ಮಾಡಬೇಕು.
1/5— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 23, 2021
3 ತಿಂಗಳಿಂದ ಆಶಾ ಕಾರ್ಯಕರ್ತೆಯರಿಗೆ ಗೌರವಧನ ಇಲ್ಲ. ಸಂಬಳವನ್ನೆ ನಂಬಿರುವ ಅವರ ಬದುಕು ದುಸ್ತರವಾಗಿದೆ. ಕೋವಿಡ್ ಮೊದಲ ಅಲೆಯಲ್ಲಿ ಜೀವಪಣಕ್ಕಿಟ್ಟು ದುಡಿದ ಆಶಾ ಕಾರ್ಯಕರ್ತೆಯರಿಗೆ ಗೌರವ ಧನದ ಜೊತೆಗೆ ತಲಾ ₹3 ಸಾವಿರ ಪ್ರೋತ್ಸಾಹಧನ ನೀಡುವುದಾಗಿ ಘೋಷಿಸಿದ್ದ ಸರ್ಕಾರ ಶೇಕಡಾ 50ರಷ್ಟು ಮಂದಿಗೆ ಕೊಟ್ಟು ಉಳಿದವರಿಗೆ ವಂಚಿಸಿದೆ ಎಂದು ಅವರು ಅಸಮಾಧಾನ ಹೊರಹಾಕಿದ್ದಾರೆ.
3 ತಿಂಗಳಿಂದ ಆಶಾ ಕಾರ್ಯಕರ್ತೆಯರಿಗೆ ಗೌರವಧನ ಇಲ್ಲ. ಸಂಬಳವನ್ನೆ ನಂಬಿರುವ ಅವರ ಬದುಕು ದುಸ್ತರವಾಗಿದೆ. ಕೋವಿಡ್ ಮೊದಲ ಅಲೆಯಲ್ಲಿ ಜೀವಪಣಕ್ಕಿಟ್ಟು ದುಡಿದ ಆಶಾ ಕಾರ್ಯಕರ್ತೆಯರಿಗೆ ಗೌರವ ಧನದ ಜೊತೆಗೆ ತಲಾ ₹3 ಸಾವಿರ ಪ್ರೋತ್ಸಾಹಧನ ನೀಡುವುದಾಗಿ ಘೋಷಿಸಿದ್ದ ಸರ್ಕಾರ ಶೇಕಡಾ 50ರಷ್ಟು ಮಂದಿಗೆ ಕೊಟ್ಟು ಉಳಿದವರಿಗೆ ವಂಚಿಸಿದೆ.
2/5— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 23, 2021
ಕೋವಿಡ್ 19 ನಿಯಂತ್ರಣಕ್ಕಾಗಿ ಶ್ರಮಿಸಿದ 16 ಮಂದಿ ಆಶಾ ಕಾರ್ಯಕರ್ತೆಯರು ಈ ವರೆಗೆ ಸಾವನ್ನಪ್ಪಿದ್ದಾರೆ. ಸಾವಿರಕ್ಕೂ ಅಧಿಕ ಮಂದಿ ಕೊರೋನಾ ವೈರಸ್ ಸೋಂಕಿತರಾಗಿದ್ದಾರೆ. ಮಾಸಿಕ ಗೌರವಧನ ಕೊಡುವಲ್ಲಿ ಸೋತಿರುವ ರಾಜ್ಯ ಸರ್ಕಾರ ಆಶಾ ಕಾರ್ಯಕರ್ತೆಯರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ಹೆಚ್ಡಿಕೆ ಆರೋಪಿಸಿದ್ದಾರೆ.
ಕೋವಿಡ್ 19 ನಿಯಂತ್ರಣಕ್ಕಾಗಿ ಶ್ರಮಿಸಿದ 16 ಮಂದಿ ಆಶಾ ಕಾರ್ಯಕರ್ತೆಯರು ಈ ವರೆಗೆ ಸಾವನ್ನಪ್ಪಿದ್ದಾರೆ. ಸಾವಿರಕ್ಕೂ ಅಧಿಕ ಮಂದಿ ಕೊರೋನಾ ವೈರಸ್ ಸೋಂಕಿತರಾಗಿದ್ದಾರೆ. ಮಾಸಿಕ ಗೌರವಧನ ಕೊಡುವಲ್ಲಿ ಸೋತಿರುವ ರಾಜ್ಯ ಸರ್ಕಾರ ಆಶಾ ಕಾರ್ಯಕರ್ತೆಯರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ.
3/5— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 23, 2021
ಕೊರೋನಾ ವಾರಿಯರ್ಸ್ ಎಂದು ಬಾಯಿಮಾತಿನಲ್ಲಿ ಹೇಳಿದ ಸರ್ಕಾರ ಪ್ರತಿ ತಿಂಗಳು ಆಶಾ ಕಾರ್ಯಕರ್ತೆಯರಿಗೆ ಸಕಾಲಕ್ಕೆ ಗೌರವಧನ ನೀಡಲು ಕೂಡಲೇ ಕ್ರಮ ಕೈಗೊಳ್ಳಬೇಕು. ದುಡಿದವರಿಗೆ ಗೌರವಧನ ಕೊಡಲು ಮೀನಾಮೇಷ ಎಣಿಸುತ್ತಿರುವ ರಾಜ್ಯ ಸರ್ಕಾರ 1250 ಕೋಟಿ ರೂಗಳ ಪ್ಯಾಕೇಜನ್ನು ಅನುಷ್ಠಾನಗೊಳಿಸುತ್ತದೆ ಎಂಬುದು ಭ್ರಮೆ ಅಲ್ಲದೆ ಮತ್ತೇನು? ಎಂದು ಮಾಜಿ ಸಿಎಂ ಪ್ರಶ್ನಿಸಿದ್ದಾರೆ.
ಕೊರೋನಾ ವಾರಿಯರ್ಸ್ ಎಂದು ಬಾಯಿಮಾತಿನಲ್ಲಿ ಹೇಳಿದ ಸರ್ಕಾರ ಪ್ರತಿ ತಿಂಗಳು ಆಶಾ ಕಾರ್ಯಕರ್ತೆಯರಿಗೆ ಸಕಾಲಕ್ಕೆ ಗೌರವಧನ ನೀಡಲು ಕೂಡಲೇ ಕ್ರಮ ಕೈಗೊಳ್ಳಬೇಕು. ದುಡಿದವರಿಗೆ ಗೌರವಧನ ಕೊಡಲು ಮೀನಾಮೇಷ ಎಣಿಸುತ್ತಿರುವ ರಾಜ್ಯ ಸರ್ಕಾರ 1250 ಕೋಟಿ ರೂಗಳ ಪ್ಯಾಕೇಜನ್ನು ಅನುಷ್ಠಾನಗೊಳಿಸುತ್ತದೆ ಎಂಬುದು ಭ್ರಮೆ ಅಲ್ಲದೆ ಮತ್ತೇನು?
4/5— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 23, 2021
ಕೊರೋನಾ ವಾರಿಯರ್ಸ್ ಎಂದು ಹಣೆಪಟ್ಟಿ ಹಚ್ಚಿದ ಸರ್ಕಾರ ಒಬ್ಬ ಆಶಾ ಕಾರ್ಯಕರ್ತೆಗೆ ಮಾತ್ರ 50 ಲಕ್ಷ ರೂಪಾಯಿ ಪರಿಹಾರ ನೀಡಿದೆ. ಉಳಿದ 15 ಮಂದಿಗೆ ಪರಿಹಾರ ಕೊಟ್ಟಿಲ್ಲ. ಸರ್ಕಾರದ ಇಂತಹ ಬೇಜವಾಬ್ದಾರಿಗಳಿಂದ ಬೇಸತ್ತು ಆಶಾ ಕಾರ್ಯಕರ್ತೆಯರು ದೂರ ಉಳಿದರೆ ಕೋವಿಡ್ 19 ನಿಯಂತ್ರಣ ಕೈ ಮೀರುತ್ತದೆ. ಸರ್ಕಾರಕ್ಕೆ ಇದು ಎಚ್ಚರಿಕೆಯ ಗಂಟೆ ಕೂಡ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕೊರೋನಾ ವಾರಿಯರ್ಸ್ ಎಂದು ಹಣೆಪಟ್ಟಿ ಹಚ್ಚಿದ ಸರ್ಕಾರ ಒಬ್ಬ ಆಶಾ ಕಾರ್ಯಕರ್ತೆಗೆ ಮಾತ್ರ 50 ಲಕ್ಷ ರೂಪಾಯಿ ಪರಿಹಾರ ನೀಡಿದೆ. ಉಳಿದ 15 ಮಂದಿಗೆ ಪರಿಹಾರ ಕೊಟ್ಟಿಲ್ಲ. ಸರ್ಕಾರದ ಇಂತಹ ಬೇಜವಾಬ್ದಾರಿಗಳಿಂದ ಬೇಸತ್ತು ಆಶಾ ಕಾರ್ಯಕರ್ತೆಯರು ದೂರ ಉಳಿದರೆ ಕೋವಿಡ್ 19 ನಿಯಂತ್ರಣ ಕೈ ಮೀರುತ್ತದೆ. ಸರ್ಕಾರಕ್ಕೆ ಇದು ಎಚ್ಚರಿಕೆಯ ಗಂಟೆ ಕೂಡ.
5/5— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 23, 2021