ಬೆಂಗಳೂರು: ಕೊರೋನಾ ಸಂಕಷ್ಟದ ಸಙದರ್ಭದಲ್ಲೂ ಸ್ವಸ್ಥ ಸಮಾಜಕ್ಕಾಗಿ ದುಡಿಯುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ. ಆರೋಗ್ಯ ಕ್ಷೇತ್ರದಲ್ಲಿ ದುಡಿಯುತ್ತಿರುವ ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸ್ಪಂಧಿಸಲು ಸರ್ಕಾರ ತೀರ್ಮಾನಿಸಿದೆ. ಈ ಸಂಬಂಧ ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.
ಸೋಮವಾರ ರಾಜ್ಯವ್ಯಾಪಿ ಆನ್ಲೈನ್ ಪ್ರತಿಭಟನೆ ನಡೆಸಿದ ಆಶಾ ಕಾರ್ಯಕರ್ತೆಯರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಹಲವಾರು ಬೇಡಿಕೆಗಳ ಬಗ್ಗೆ ಗಮನ ಸೆಳೆದರು.ಸೂಕ್ತ ಗೌರವಧನ ನೀಡಬೇಕು, ಬಾಜಕಿ ಇರುವ ವೇತನ ಬಿಡುಗಡೆ ಮಾಡಬೇಕು, ಕೊರೋನಾ ಸೋಂಕಿತರಿಗೆ ಸೂಕ್ತ ವಿಮಾ ಪರಿಹಾರ ನೀಡಬೇಕು, ತಮಗೆ ಸುರಕ್ಷಾ ವ್ಯವಸ್ಥೆ ಹಾಗೂ ಸೌಲಬ್ಯ ಕಲ್ಪಿಸಬೇಕೆಂದೂ ಸರ್ಕಾರವನ್ನು ಆಗ್ರಹಿಸಿದ್ದರು.
ಇದನ್ನೂ ಓದಿ.. ಆಶಾ ಕಾರ್ಯಕರ್ತೆಯರಿಗೆ ಪರಿಹಾರ, ವಿಮಾ ಸೌಲಭ್ಯ. ಗುರುವಾರ ಸಂಪುಟ ಸಭೆಯಲ್ಲಿ ತೀರ್ಮಾನ?
ಈ ಕುರಿತಂತೆ ವಿಜಯಪುರದಲ್ಲಿ ಪ್ರತಿಕ್ರಿಯಿಸಿದ ಸಚಿವೆ ಶಶಿಕಲಾ ಜೊಲ್ಲೆ, ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವ ಸಂಬಂಧ ಸಂಪುಟದಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದರು. ಆಶಾ ಕಾರ್ಯಕರ್ತೆಯರ ವೇತನ ಸಮಸ್ಯೆ ಬಗೆಹರಿಸಲಾಗುವುದು, ಅವರ ಆರೋಗ್ಯ ಕುರಿತ ಬೇಡಿಕೆಗಳನ್ನೂ ಈಡೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.