ಬೆಂಗಳೂರು: ವಿಧಾನಸಭೆಯಲ್ಲಿ ಆರೆಸ್ಸೆಸ್ ಪ್ರಾರ್ಥನೆ ಗೀತೆ ಹಾಡಿದ ಕಾರಣಕ್ಕೆ ಡಿ.ಕೆ.ಶಿವಕುಮಾರ್ ಕ್ಷಮೆ ಯಾಚಿಸಿರುವ ಬೆಳವಣಿಗೆ ಬಗ್ಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ಬೇಸರ ವ್ಯಕ್ತಪಡಿಸಿದ್ದಾರೆ. ಡಿಸಿಎಂ ಡಿಕೆಶಿ ಅವರಿಗೆ ಕಿಂಚಿತ್ತಾದರೂ ಸ್ವಾಭಿಮಾನ ಇದ್ದಿದ್ದರೆ, ಕಿಂಚಿತ್ತಾದರೂ ಧೈರ್ಯ ಇದ್ದಿದ್ದರೆ, ಕ್ಷಮೆ ಕೇಳಬಾರದಿತ್ತು. ಕೇಳಲೇಬೇಕು ಎನ್ನುವ ಒತ್ತಡ ಇದ್ದಿದ್ದರೆ ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು ಎಂದು ಅಶೋಕ್ ಪ್ರತಿಕ್ರಿಯಿಸಿದ್ದಾರೆ.
“ನಮಸ್ತೇ ಸದಾ ವತ್ಸಲೇ ಮಾತೃಭೂಮೇ” ಎಂದು ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎನ್ನುವುದಾದರೆ, ಕಾಂಗ್ರೆಸ್ ಪಕ್ಷದ ಪ್ರಕಾರ ಭಾರತೀಯರು ಇನ್ಯಾರಿಗೆ ಜಯಕಾರ ಹಾಕಬೇಕು? ಇಟಲಿ ಮಾತೆಗಾ? ಇಟಲಿಯಿಂದ ಬಂದ ಮೇಡಂಗಾ? ಎಂದು ಅಶೋಕ್ ಪ್ರಶ್ನಿಸಿದ್ದಾರೆ. ಈ ಕುರಿತಂತೆ ಅವರು ಸಾಮಾಜಿಕ ಮಾಧ್ಯಮ ‘X’ನಲ್ಲಿ ಹಾಕಿರುವ ಪೋಸ್ಟ್ ಗಮನಸೆಳೆದಿದೆ.
ಆರ್ ಎಸ್ಎಸ್ ಪ್ರಾರ್ಥನಾ ಗೀತೆಯ ಮೊದಲನೆಯ ಸಾಲಿನ ಸಾರಾಂಶ ಇಷ್ಟೇ. ‘ನಮ್ಮನ್ನೆಲ್ಲ ವಾತ್ಸಲ್ಯದಿಂದ ಸಾಕುತ್ತಿರುವ ಮಾತೃ ಸಮಾನಳಾದ ತಾಯಿ ಭಾರತಾಂಬೆಗೆ ನನ್ನ ನಮಸ್ಕಾರಗಳು’. ಜನ್ಮ ಕೊಟ್ಟ ಮಾತೃಭೂಮಿ ಬಗ್ಗೆ ಈ ಭಾವನೆ ಇಟ್ಟುಕೊಳ್ಳುವುದು ತಪ್ಪೇ? ತಾಯ್ನೆಲಕ್ಕೆ ನಮಸ್ಕಾರ ಮಾಡುವುದೇ ತಪ್ಪೇ? ಎಂದು ಅವರು ಪ್ರಶ್ನಿಸಿದ್ದಾರೆ.
ಒಂದು ಕಡೆ ವಿಧಾನಸೌಧದಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿದವರನ್ನ ಸಮರ್ಥನೆ ಮಾಡಿಕೊಳ್ಳುವ ಕಾಂಗ್ರೆಸ್ ಪಕ್ಷ, ಮತ್ತೊಂದು ಕಡೆ ತಾಯಿ ಭಾರತಾಂಬೆಗೆ ನಮಸ್ಕರಿಸುವವರನ್ನ ಅಪರಾಧಿ ಸ್ಥಾನದಲ್ಲಿ ನಿಲ್ಲಿಸುತ್ತದೆ. ಇದನ್ನು ದೇಶದ್ರೋಹಿ ಮನಸ್ಥಿತಿ ಅನ್ನದೇ ಇನ್ನೇನನ್ನಲು ಸಾಧ್ಯ? ಎಂದಿರುವ ಅಶೋಕ್, ಇಷ್ಟಕ್ಕೂ ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು? ಸೋನಿಯಾ ಗಾಂಧಿ ಅವರಾ? ರಾಹುಲ್ ಗಾಂಧಿ ಅವರಾ? ಕೆ.ಸಿ.ವೇಣುಗೋಪಾಲ್ ಅವರಾ? ಸುರ್ಜೆವಾಲಾ ಅವರಾ? ಅಥವಾ ಹರಿಪ್ರಸಾದ್ ಅವರು ಹೇಳಿದ್ದಕ್ಕೆ ಕ್ಷಮೆ ಕೇಳಿದರಾ? ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕಿಂಚಿತ್ತಾದರೂ ಸ್ವಾಭಿಮಾನ ಇದ್ದಿದ್ದರೆ, ಕಿಂಚಿತ್ತಾದರೂ ಧೈರ್ಯ ಇದ್ದಿದ್ದರೆ, ಕ್ಷಮೆ ಕೇಳಬಾರದಿತ್ತು. ಕೇಳಲೇಬೇಕು ಎನ್ನುವ ಒತ್ತಡ ಇದ್ದಿದ್ದರೆ ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು ಎಂದಿದ್ದಾರೆ.
“He who loves not his country can love nothing”. ಅಂದರೆ “ತನ್ನ ಮಾತೃಭೂಮಿಯನ್ನು ಪ್ರೀತಿಸದವನು ಏನನ್ನೂ ಪ್ರೀತಿಸಲಾರ” ಎನ್ನುವ ಮಾತಿದೆ. ಆದರೆ ಕಾಂಗ್ರೆಸ್ ಪಕ್ಷದಲ್ಲಿ “ಕುರ್ಚಿಯ ಮೇಲೆ ಪ್ರೀತಿ ಇದ್ದರೆ ದೇಶಪ್ರೇಮವನ್ನು ಬಿಡಬೇಕು” ಎನ್ನುವ ಪರಿಸ್ಥಿತಿ ಇದೆ. ಅಧಿಕಾರದ ಮೇಲಿನ ವ್ಯಾಮೋಹಕ್ಕೆ, ಜನ್ಮ ಕೊಟ್ಟ ತಾಯ್ನೆಲವನ್ನೇ ಬಿಟ್ಟುಕೊಡುವ so-called ನಾಯಕರು ನಾಡಿನ ಮುಖ್ಯಮಂತ್ರಿಗಳಾಗಲು ಹೊರಟಿರುವುದು ನಮ್ಮ ನಾಡಿನ ಸದ್ಯದ ದೊಡ್ಡ ದುರಂತ ಎಂದು ಅಶೋಕ್ ಬಣ್ಣಿಸಿದ್ದಾರೆ.
“ನಮಸ್ತೇ ಸದಾ ವತ್ಸಲೇ ಮಾತೃಭೂಮೇ” ಎಂದು ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಡಿಸಿಎಂ @DKShivakumar ಅವರು ಕ್ಷಮೆ ಕೇಳಬೇಕು ಎನ್ನುವುದಾದರೆ, ಕಾಂಗ್ರೆಸ್ ಪಕ್ಷದ ಪ್ರಕಾರ ಭಾರತೀಯರು ಇನ್ಯಾರಿಗೆ ಜಯಕಾರ ಹಾಕಬೇಕು? ಇಟಲಿ ಮಾತೆಗಾ? ಇಟಲಿಯಿಂದ ಬಂದ ಮೇಡಂಗಾ?
ಆರ್ ಎಸ್ಎಸ್ ಪ್ರಾರ್ಥನಾ ಗೀತೆಯ ಮೊದಲನೆಯ ಸಾಲಿನ ಸಾರಾಂಶ ಇಷ್ಟೇ.… pic.twitter.com/41Nwrv8RKa
— R. Ashoka (@RAshokaBJP) August 26, 2025