ಮೈಸೂರು: ಜಗದ್ವಿಖ್ಯಾತ ಮೈಸೂರು ದಸರಾದಲ್ಲಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವನ್ನಪ್ಪಿದ ಬೆನ್ನಲ್ಲೇ ಇದೀಗ ಮತ್ತೊಂದು ದಸರಾ ಆನೆ ಅಶ್ವತ್ಥಾಮ ಕೂಡಾ ದಾರುಣವಾಗಿ ಮೃತಪಟ್ಟಿದೆ.
ನಾಗರಹೊಳೆ ಅರಣ್ಯ ಪ್ರದೇಶದ ಗಡಿ ಭಾಗದಲ್ಲಿ ಸೋಲಾರ್ ತಂತಿ ಬೇಲಿಯಲ್ಲಿ ವಿದ್ಯುತ್ ಸ್ಪರ್ಷವಾಗಿಬ ಅಶ್ವತ್ಥಾಮ ಆನೆ ಸಾವನ್ನಪ್ಪಿದೆ ಎನ್ನಲಾಗಿದೆ.
ಪಿರಿಯಾಪಟ್ಟಣ ಸಮೀಪ ಶಿಬಿರದಲ್ಲಿದ್ದ 38 ವರ್ಷದ ಅಶ್ವತ್ಥಾಮ ಆನೆ, ಎರಡು ಬಾರಿ ಮೈಸೂರು ದಸರಾ ಮೆರವಣಿಗೆಯಲ್ಲಿ ಭಾಗಿಯಾಗಿತ್ತು.





































































