ವಾಷಿಂಗ್ಟನ್: ಅಮೆರಿದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹತ್ಯೆಗೆ ಯತ್ನ ನಡೆದಿದ್ದು ಅವರು ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ಟ್ರಂಪ್ ಮೇಲೆ ಗುಂಡುನ ದಾಳಿ ನಡೆದಿದ್ದು, ಪ್ರತಿ ದಾಳಿಯಲ್ಲಿ ದುಷ್ಕರ್ಮಿ ಸಾವನ್ನಪ್ಪಿದ್ದಾನೆ.
I just landed and missed an assignation attempt. Holy shit. What a bad ass reaction from Trump. The election is over. He’s the next president. The Dems should give up. They can’t beat him now. pic.twitter.com/omtbue191d
— Dave Portnoy (@stoolpresidente) July 13, 2024
ಅಮೆರಿಕದ ಪೆನ್ಸಿಲ್ವೇನಿಯಾದಲ್ಲಿ ಡೊನಾಲ್ಡ್ ಟ್ರಂಪ್ ಚುನಾವಣಾ ರ್ಯಾಲಿಯಲ್ಲಿ ಭಾಗಿಯಾಗಿದ್ದಾಗ ಗುಂಡಿನ ದಾಳಿ ನಡೆದಿದೆ. ಪೆನ್ಸಿಲ್ವೇನಿಯಾದ ಬಟ್ಲರ್ನಲ್ಲಿ ಟ್ರಂಪ್ ವೇದಿಕೆಯಲ್ಲಿ ಮಾತನಾಡುತ್ತಿದ್ದಾಗ ಗುಂಡಿನ ಸದ್ದು ಮಾರ್ಧನಿಸಿದೆ. ಸ್ಫೋಟದ ಸದ್ದಿಗೆ ಟ್ರಂಪ್ ವೇದಿಕೆಯ ಮೇಲೆ ಬಿದ್ದಿದ್ದಾರೆ. ಘಟನೆಯಲ್ಲಿ ಟ್ರಂಪ್ ಕಿವಿಗೆ ಗಾಯವಾಗಿದೆ. ಈ ಸಂದರ್ಭದಲ್ಲಿ ಭದ್ರತಾ ಸಿಬ್ಬಂದಿ ಪ್ರತಿ ದಾಳಿ ನಡೆಸಿದ್ದು, ಘಟನೆಯಲ್ಲಿ ಶೂಟರ್ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ.
ಹತ್ಯೆಗೆ ಯತ್ನಿಸಿದ ವ್ಯಕ್ತಿಯ ಮೇಲೆ ಪ್ರತಿದಾಳಿ ನಡೆದಾಗ ಟ್ರಂಪ್ ರ್ಯಾಲಿಯಲ್ಲಿ ಭಾಗವಹಿದ್ದ ವ್ಯಕ್ತಿಯೂ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಈ ನಡುವೆ, ಘಟನೆಯಲ್ಲಿ ಗಾಯಗೊಂಡಿರುವ ಡೊನಾಲ್ಡ್ ಟ್ರಂಪ್ ಸುರಕ್ಷಿತವಾಗಿದ್ದಾರೆ ಎಂದಿರುವ ಅಧಿಕಾರಿಗಳು, ಅವರ ಸುರಕ್ಷತೆಗಾಗಿ ಕ್ರಮ ಕೈಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.