ಮಂಗಳೂರು: ರಾಜ್ಯದ ಮುಖ್ಯಮಂತ್ರಿ ಬದಲಾವಣೆ ಹಾಗೂ ಸಚಿವರಾದ ಈಶ್ವರಪ್ಪ, ಶೆಟ್ಟರ್ ಗುಂಪುಗಳನ್ನು ಹೊರಗಿಡುವ ಕುರಿತ ಸಂಭಾಷಣೆಯ ಆಡಿಯೋ ತಮ್ಮದಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ನಳಿನ್ ಕುಮಾರ್ ಅವರ ಧ್ವನಿಯನ್ನು ಹೋಲುವ ಆಡಿಯೋದಲ್ಲಿ ಬಿಜೆಪಿಯಲ್ಲಿನ ಆಂತರಿಕ ಬೆಳವಣಿಗೆ ಕುರಿತ ಮಾಹಿತಿ ಇದೆ. ವೈರಲ್ ಆಗುತ್ತಿರುವ ಈ ಆಡಿಯೋ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. ಈ ಕುರಿತಂತೆ ಪ್ರತಿಕ್ರಿಯಿಸಿರುವ ನಳಿನ್ ಕುಮಾರ್ ಕಟೀಲ್, ಈ ಆಡಿಯೋಗೂ ತಮಗೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ. ‘ನನ್ನ ಧ್ವನಿಯನ್ನು ಅನುಕರಿಸಿ ಪಕ್ಷಕ್ಕೆ ಧಕ್ಕೆ ತರುವ ಮಾದರಿಯಲ್ಲಿ ನಕಲಿ ಆಡಿಯೋ ಒಂದನ್ನು ಯಾರೋ ಕಿಡಿಗೇಡಿಗಳು ವಾಟ್ಸ್ ಆ್ಯಪ್‍ನಲ್ಲಿ ಹರಿಬಿಟ್ಟಿದ್ದು, ಇದರ ಸತ್ಯಾಸತ್ಯತೆ ಕುರಿತು ತನಿಖೆ ನಡೆಸಬೇಕು’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡುವುದಾಗಿ ತಿಳಿಸಿದ್ದಾರೆ. ಈ ಕರಿತಂತೆ ಅವರು ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.
ನನ್ನ ಧ್ವನಿಯನ್ನು ಅನುಕರಿಸಿ ಪಕ್ಷಕ್ಕೆ ಧಕ್ಕೆ ತರುವ ಮಾದರಿಯಲ್ಲಿ ನಕಲಿ ಆಡಿಯೋ ಒಂದನ್ನು ಯಾರೋ ಕಿಡಿಗೇಡಿಗಳು ವಾಟ್ಸ್ ಆ್ಯಪ್‍ನಲ್ಲಿ ಹರಿಬಿಟ್ಟಿದ್ದಾರೆ.
ಇದರ ಸತ್ಯಾಸತ್ಯತೆ ಕುರಿತು ತನಿಖೆ ನಡೆಸಬೇಕು ಎಂದು ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ ಅವರಿಗೆ ಮನವಿ ಮಾಡುತ್ತೇನೆ.
1/2#NalinSpeaks
— BJP Karnataka (@BJP4Karnataka) July 18, 2021
ಪಕ್ಷಕ್ಕೆ ಮತ್ತು ಸರ್ಕಾರಕ್ಕೆ ಕೆಟ್ಟ ಹೆಸರು ತರುವ ದೃಷ್ಟಿಯಿಂದ ಈ ಆಡಿಯೋವನ್ನು ಹರಿಬಿಟ್ಟಿದ್ದು, ತನಿಖೆ ನಡೆಸಿದರೆ ಅದರ ನಕಲಿತನ ಸಾಬೀತಾಗಲಿದೆ ಎಂದಿರುವ ಅವರು, ಈ ಆಡಿಯೋ ಹಿಂದಿರುವ ಕಿಡಿಗೇಡಿಗಳು ಯಾರೆಂಬ ಕುರಿತು ತನಿಖೆಗೆ ಒತ್ತಾಯಿಸಿದ್ದಾರೆ.
ಪಕ್ಷಕ್ಕೆ ಮತ್ತು ಸರ್ಕಾರಕ್ಕೆ ಕೆಟ್ಟ ಹೆಸರು ತರುವ ದೃಷ್ಟಿಯಿಂದ ಈ ಆಡಿಯೋವನ್ನು ಹರಿಬಿಟ್ಟಿದ್ದು, ತನಿಖೆ ನಡೆಸಿದರೆ ಅದರ ನಕಲಿತನ ಸಾಬೀತಾಗಲಿದೆ.
ಆದ್ದರಿಂದ ಅದರ ಹಿಂದಿರುವ ಕಿಡಿಗೇಡಿಗಳು ಯಾರೆಂಬ ಕುರಿತು ತನಿಖೆ ನಡೆಸಲು ಒತ್ತಾಯಿಸುತ್ತಿದ್ದೇನೆ.
ಶ್ರೀ @nalinkateel
ಬಿಜೆಪಿ ರಾಜ್ಯಾಧ್ಯಕ್ಷರು2/2#NalinSpeaks
— BJP Karnataka (@BJP4Karnataka) July 18, 2021