ಮೆಲ್ಬೋರ್ನ್: ಆಸ್ಟ್ರೇಲಿಯನ್ ಓಪನ್ 2024ರಲ್ಲಿ ಪುರುಷರ ಸಿಂಗಲ್ಸ್ ಅತ್ಯಂತ ರೋಚಕತೆಗೆ ಸಾಕ್ಷಿಯಾಗಿತ್ತು. ಇಟಲಿಯ ಜಾನಿಕ್ ಸಿನ್ನರ್ ಆಸ್ಟ್ರೇಲಿಯನ್ ಓಪನ್ 2024ರ ಪುರುಷರ ಸಿಂಗಲ್ಸ್ ಪ್ರಶಸ್ತಿಯನ್ನು ಗೆದ್ದಿದ್ದಾರೆ.
ಮೆಲ್ಬೋರ್ನ್ ಪಾರ್ಕ್ನಲ್ಲಿ ಬಹಾನುವಾರ ನಡೆದ ಫೈನಲ್ ಹಣಾಹಣಿಯಲ್ಲಿ ಜಾನಿಕ್ ಸಿನ್ನರ್ ಅವರು ಮೂರನೇ ಶ್ರೇಯಾಂಕದ ರಷ್ಯಾದ ಡೇನಿಯಲ್ ಮೆಡ್ವೆಡೆವ್ ಅವರನ್ನು ಸೋಲಿಸಿದರು. ಆರಂಭದಲ್ಲಿ ಹಿನ್ನಡೆ ಅನುಭವಿಸಿದರೂ ನಂತರ ಅವರು ಉತ್ತಮ ಪ್ರದರ್ಶನ ನೀಡಿ 3-6, 3-6, 6-4, 6-4, 6-3 ಮೂಲಕ ಈ ಪ್ರಶಸ್ತಿ ಗೆದ್ದ ಮೊದಲ ಇಟಾಲಿಯನ್ ಆಟಗಾರನಾಗಿರುವ ಜಾನಿಕ್ ಅವರ ಪಾಲಿಗೆ ಇದು ಚೊಚ್ಚಲ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಯಾಗಿದೆ .
Sublime from Sinner 🥕
The Italian 🇮🇹 clinches his maiden Grand Slam title 🏆
He triumphs in five hardfought sets 3-6 3-6 6-4 6-4 6-3 to win #AO2024. @janniksin • @wwos • @espn • @eurosport • @wowowtennis pic.twitter.com/DTCIqWoUoR
— #AusOpen (@AustralianOpen) January 28, 2024

























































