ಮಂಗಳೂರು: ಬಂದರು ನಗರಿ ಮಂಗಳೂರಿನಲ್ಲಿ ರಸ್ತೆಯಲ್ಲಿ ನಮಾಜ್ ಮಾಡಿದ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಈ ಬೆಳವಣಿಗೆ ಬಗ್ಗೆ ಆಕ್ರೋಶ ಹೊರಹಾಕಿರುವ ಬಿಜೆಪಿ, ರಾಜ್ಯ ಸರ್ಕಾರ ಮತಾಂಧರಿಗೆ ಮಣೆ ಹಾಕುತ್ತಿದೆ ಎಂದು ದೂರಿದ್ದಾರೆ.
ಸರ್ಕಾರದ ನಿಲುವು ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್, ಮಂಗಳೂರಿನ ರಸ್ತೆಯಲ್ಲಿ ನಮಾಝ್ ನಡೆಸಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ ಪ್ರಕರಣದಲ್ಲಿ ಅಲ್ಪಸಂಖ್ಯಾತರ ಒಲೈಕೆಗೆ ಮುಂದಾಗಿರುವ ರಾಜ್ಯ ಸರಕಾರ ಪೊಲೀಸ್ ಇಲಾಖೆಯ ಮೇಲೆ ಒತ್ತಡ ಹಾಕಿ ಕೇಸನ್ನು ಹಿಂದಕ್ಕೆ ಪಡೆದುಕೊಂಡಿದೆ ಎಂದು ದೂರಿದ್ದಾರೆ.
ಈ ಬಗ್ಗೆ ಟ್ವಿಟರ್ನಲ್ಲಿ ಆಕ್ರೋಶ ಹೊರಹಾಕಿರುವ ಅವರು, ಕೆಲವು ಮತಾಂಧರನ್ನು ಖುಷಿಪಡಿಸಲು ಹಿಂದೂ ಮುಖಂಡ ಶರಣ್ ಪಂಪ್ ವೆಲ್ ಅವರ ಮೇಲೆ ಕೇಸು ಹಾಕಿ ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ಕಾಂಗ್ರೆಸ್ ಯಾವ ಮಟ್ಟಕ್ಕೂ ಇಳಿಯಲು ಹೇಸುವುದಿಲ್ಲ ಎಂದು ಸಾಬೀತುಪಡಿಸಿದೆ ಎಂದು ಸಿಟ್ಟು ವ್ಯಕ್ತಪಡಿಸಿದ್ದಾರೆ.
ಮಂಗಳೂರಿನ ರಸ್ತೆಯಲ್ಲಿ ನಮಾಝ್ ನಡೆಸಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ ಪ್ರಕರಣದಲ್ಲಿ ಅಲ್ಪಸಂಖ್ಯಾತರ ಒಲೈಕೆಗೆ ಮುಂದಾಗಿರುವ ರಾಜ್ಯ ಸರಕಾರ ಪೊಲೀಸ್ ಇಲಾಖೆಯ ಮೇಲೆ ಒತ್ತಡ ಹಾಕಿ ಕೇಸನ್ನು ಹಿಂದಕ್ಕೆ ಪಡೆದುಕೊಂಡಿದೆ.
ಅಷ್ಟೇ ಅಲ್ಲದೆ, ಕೆಲವು ಮತಾಂಧರನ್ನು ಖುಷಿಪಡಿಸಲು ಹಿಂದೂ ಮುಖಂಡ ಶ್ರೀ ಶರಣ್ ಪಂಪ್ ವೆಲ್ ಅವರ ಮೇಲೆ ಕೇಸು ಹಾಕಿ ವೋಟ್…
— Nalinkumar Kateel (@nalinkateel) May 31, 2024














































































