ಬೆಂಗಳೂರು: ಮಂಡ್ಯ ಜಿಲ್ಲೆಯಲ್ಲಿರುವ ಕೃಷ್ಣರಾಜ ಸಾಗರ ಅಣೆಕಟ್ಟೆ ಸುತ್ತಮುತ್ತ 20 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಿ ಹೈಕೋರ್ಟ್ ಮಹತ್ವದ ಆದೇಶ ಪ್ರಕಟಿಸಿದೆ.
ಕೃಷ್ಣರಾಜ ಸಾಗರ (ಕೆಆರ್‌ಎಸ್ ) ಅಣೆಕಟ್ಟೆ ಸುತ್ತ ಮುತ್ತ ಅಕ್ರಮ ಗಣಿಗಾರಿಕೆ ಕುರಿತಂತೆ ಹಲವು ವರ್ಷಗಳಿಂದ ವಿವಾದ ಉಂಟಾಗಿತ್ತು. ರಾಜಕೀಯ ಪ್ರಭಾವಿಗಳೇ ಈ ಗಣಿಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪವೂ ಕೇಳಿಬರುತ್ತಿದೆ. ಈ ಸಂಬಂಧದ ಪ್ರಕರಣ ಬಗ್ಗೆ ವಿಚಾರಣೆ ನಡೆಸಿರುವ ಹೈಕೋರ್ಟ್ ಸೋಮವಾರ ಮಹತ್ವದ ಆದೇಶ ಪ್ರಕಟಿಸಿದೆ.
ಆರ್‌ಎಸ್ ಜಲಾಶಯಕ್ಕೆ ಹಾನಿ ಮಾಡುವುದನ್ನು ತಡೆಗಟ್ಟಬೇಕಿದೆ. ಕೆಆರ್‌ಎಸ್ ಸುರಕ್ಷತೆ ನಮಗೆ ಮುಖ್ಯ ಎಂದಿರುವ ಮುಖ್ಯ ನಾಯಮೂರ್ತಿ ಪಿ ಬಿ ವರಾಳೆ ಮತ್ತು ನ್ಯಾ. ಕೃಷ್ಣ ಎಸ್.ದೀಕ್ಷಿತ್ ಅವರನ್ನೊಳಗೊಂಡ ಹೈಕೋರ್ಟ್ ಪೀಠ, ಕೆಆರ್‌ಎಸ್ ಸುತ್ತಮುತ್ತ 20 ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ ನಡೆಸುವಂತಿಲ್ಲ ಎಂದು ಆದೇಶಿಸಿದೆ.
ಈ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿರುವ ಮಂಡ್ಯ ಸಂಸದೆ ಸುಮಲತಾ ಅಂಬರೀಷ್, ಕೆ.ಆರ್.ಎಸ್ ಸುತ್ತಮುತ್ತ 20 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧ ಮಾಡಿ ಹೊರಡಿಸಿರುವ ಹೈಕೋರ್ಟ್ ಮುಖ್ಯ ವಿಭಾಗೀಯ ಪೀಠದ ಆದೇಶ ಅತ್ಯಂತ ಸೂಕ್ತವಾಗಿದೆ ಎಂದಿದ್ದಾರೆ. ಕೆ.ಆರ್.ಎಸ್ ಸುತ್ತಮುತ್ತ ಗಣಿಗಾರಿಕೆ ನಿಷೇಧಿಸಬೇಕು ಎನ್ನುವ ನನ್ನ ಬಹುದಿನದ ಹೋರಾಟಕ್ಕೆ ಈ ಆದೇಶ ಮತ್ತಷ್ಟು ಬಲ ತಂದಿದೆ. ನಾವೆಲ್ಲರೂ ಕೆ.ಆರ್.ಎಸ್ ಅನ್ನು ಉಳಿಸಿಕೊಳ್ಳಬೇಕಿದೆ ಎಂದು ಸುಮಲತಾ ಪ್ರತಿಪಾದಿಸಿದ್ದಾರೆ.
https://www.facebook.com/SumalathaAmbi/posts/910058523809924?ref=embed_post