ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿಂದು ಭೀಕರ ಸ್ಫೋಟದ ಅವಘಡ ಜನರನ್ನು ಬೆಚ್ಚಿಬೀಳಿಸಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ರಾಜಧಾನಿಯ ಚಾಮರಾಜಪೇಟೆ ಸಮೀಪ ನ್ಯೂ ತರಗುಪೇಟೆ ಬಳಿ ಕಟ್ಟಡವೊಂದರಲ್ಲಿ ಸ್ಫೋಟದ ಘಟನೆ ಸಂಭವಿಸಿದೆ. ಸ್ಪೋಟದ ಸಂದರ್ಭದಲ್ಲಿ ಅಗ್ನಿ ಆಕಸ್ಮಿಕದ ಸನ್ನಿವೇಶ ಸೃಷ್ಟಿಯಾಗಿದೆ. ಭೀಕರ ಶಬ್ಧದೊಂದಿಗೆ ಸ್ಫೋಟ ಸಂಭವಿಸಿದ್ದು ಘಟನೆಯಿಂದಾಗಿ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ಸುದ್ದಿ ತಿಳಿದು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದ್ದಾರೆ. ಅಗ್ನಿ ಶಾಮಕ ದಳ ಸಿಬ್ಬಂದಿ ಕೂಡಾ ಸ್ಥಳಕ್ಕೆ ದೌಡಾಯಿಸಿ ಸ್ಥಳೀಯರ ನೆರವಿನೊಂದಿಗೆ ರಕ್ಷಣಾ ಕಾರ್ಯಾಚರಣೆ ಕೈಗೊಂಡರು.
ಭೀಕರ ಸ್ಫೋಟದಲ್ಲಿ ಹಲವರು ಗಾಯಗೊಂಡಿದ್ದು ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲವು ವಾಹನಗಳೂ ಹಾನಿಗೊಂಡಿವೆ.