ಬೆಂಗಳೂರು:ರಾಜಧಾನಿ ಬೆಂಗಳೂರು ಹೊರವಲಯದ ಆನೇಕಲ್ ನಲ್ಲಿ ರೌಡಿ ಶೀಟರ್’ನನ್ನು ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿರುವ ಘಟನೆ ಶುಕ್ರವಾರ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನುಮಂಜುನಾಥ್ ಎಂದು ಗುರುತಿಸಲಾಗಿದೆ. ಮಂಜುನಾಥ್ ವಿರುದ್ಧ ಕೊಲೆ, ದರೋಡೆ ಸಹಿತ ಹಲವಾರು ಪ್ರಕರಣವೂ ದಾಖಲಾಗಿತ್ತು.
ಆನೇಕಲ್‌ನ ವೀವರ್ಸ್ ಕಾಲೋನಿಯಲ್ಲಿ ಈ ಕೊಲೆ ನಡೆದಿದ್ದು, ಪ್ರಕರಣ ಸಂಬಂದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ, ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.



















































