ದೇವನಹಳ್ಳಿ: 72ನೇ ಗಣರಾಜ್ಯೋತ್ಸವ ಅಂಗವಾಗಿ ದೇವನಹಳ್ಳಿ ತಾಲ್ಲೂಕು, ಬೀರಸಂದ್ರ ಗ್ರಾಮ ಬಳಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾಡಳಿತದ ವತಿಯಿಂದ ಆಚರಿಸಲಾಯಿತು. ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸಲ್ಲಿಸಿದರು.
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೆ.ಕರಿಯಪ್ಪ, ಜಿಲ್ಲಾಧಿಕಾರಿ ಕಚೇರಿ ಸಹಾಯಕ ರಾಜೀವಲೋಚನ ಸೇರಿದಂತೆ ಅನೇಕ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.