ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಯುನಿವರ್ಸಿಟಿ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಇಂಜಿನಿಯರಿಂಗ್”ನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಸಂಶೋಧನಾ ವಿದ್ಯಾರ್ಥಿಯಾಗಿರುವ ಚಲಪತಿ ಕೆ. ಅವರಿಗೆ ಪಿಎಚ್.ಡಿ ಪ್ರದಾನ ಮಾಡಲಾಗಿದೆ.
ಬೆಂಗಳೂರು ವಿವಿಯ “ಯುನಿವರ್ಸಿಟಿ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಇಂಜಿನಿಯರಿಂಗ್”ನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಸಂಶೋಧನಾ ವಿದ್ಯಾರ್ಥಿ ಚಲಪತಿ ಕೆ. ಅವರು ಯುವಿಸಿಇ, ಸಿವಿಲ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕರಾದ ಡಾ. ಇನಾಯತುಲ್ಲಾ ಎಂ ಇವರ ಮಾರ್ಗದರ್ಶನದಲ್ಲಿ ಮಂಡಿಸಿದ “Quantitative and Qualitative Analysis of seasonal and Spatial variations in surface and Groundwater at River Basin Scale” ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿ ಪ್ರದಾನ ಮಾಡಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.