ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಸಂಶೋಧನಾರ್ಥಿ ಲಿಂಗರಾಜು ಎಸ್.ಎಂ ಅವರಿಗೆ ಅತ್ಯುತ್ತಮ ಸಂಶೋಧನಾ ಲೇಖನದ ‘ಗೌರವ ಪ್ರಶಸ್ತಿ’ ಸಿಕ್ಕಿದೆ. ವಿಶ್ವವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಪುರಸ್ಕಾರ ಪ್ರದಾನ ಮಾಡಲಾಯಿತು.
ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿ ಆವರಣದ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿಶೇಷ ಘಟಕದ ವತಿಯಿಂದ ಜಂಟಿ ಸಹಯೋಗದೊಂದಿಗೆ ಆಯೋಜಿಸಿದ “ಭಾರತದ ಸಮಕಾಲೀನ ಸವಾಲುಗಳು ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಚಿಂತನೆಗಳು” ಎಂಬ ವಿಷಯದ ಕುರಿತು ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ ನಡೆಯಿತು.
ಇದರ ಅಂಗವಾಗಿ ಸಂಶೋಧನಾ ವಿದ್ಯಾರ್ಥಿಗಳಿಗೆ ನೀಡುವ (Research Scholar) ಅತ್ಯುತ್ತಮ ಸಂಶೋಧನಾ ಲೇಖನ : 2021-2022 ಸಾಲಿನ ಪುರಸ್ಕಾರ ನೀಡಲಾಗಿದೆ. ಕನ್ನಡ ಅಧ್ಯಯನ ಕೇಂದ್ರ ವಿಭಾಗದ ಪ್ರಾಧ್ಯಾಪಕರು ಹಾಗೂ ನಿರ್ದೇಶಕರಾದ ಪ್ರೊ.ಮುನಿಯಪ್ಪ ಅವರ ಮಾರ್ಗದರ್ಶನದಲ್ಲಿ ಪೂರ್ಣಾವಧಿ ಅಧ್ಯಯನ ಮಾಡುತ್ತಿರುವ ಸಂಶೋಧನಾ ವಿದ್ಯಾರ್ಥಿ ಲಿಂಗರಾಜು ಎಸ್.ಎಂ. ಅವರಿಗೆಗೆ ವಿಶ್ವವಿದ್ಯಾಲಯದ ಆಡಳಿತ ವರ್ಗದ ಕುಲಸಚಿವ ಡಾ.ಸಿ.ಶ್ರೀನಿವಾಸ್, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜ್ ಎಚ್ ಹಾಗೂ ಕೇಂದ್ರದ ನಿರ್ದೇಶಕ ಡಾ.ಹೊನ್ನು ಸಿದ್ದಾರ್ಥ ಸಿ.ಬಿ, ವಿತ್ತೀಯ ಅಧಿಕಾರಿ ಅಜಿತ್ ಕುಮಾರ್ ಹೆಗ್ಡೆ, ಡಾ.ಪಿ.ಸಿ.ನಾಗೇಶ್, ಡಾ. ನಾಗರತ್ಮಮ್ಮ, ಡಾ. ಮುರಳೀಧರ್ ಬಿ.ಎಲ್, ಸಹಿತ ಪ್ರಮುಖರ ಉಪಸ್ಥಿತಿಯಲ್ಲಿ 10.000 ರೂ ನಗದು ಬಹುಮಾನ, ಸ್ಮರಿಣಿಕೆ ನೀಡಿ ಗೌರವಿಸಲಾಯಿತು.