ಬೆಂಗಳೂರು: ರಾಯಚೂರು ಜಿಲ್ಲೆ ಮೂಡಲಗುಂಡ ಗ್ರಾಮದ ಶಿವರಾಜ ರವರು ಬೆಂಗಳೂರು ವಿಶ್ವವಿದ್ಯಾಲಯ ಸಮಾಜಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿ ಶಿವರಾಜ ಅವರಿಗೆ ಪಿಎಚ್.ಡಿ ಪದವಿ ಲಭಿಸಿದೆ.
ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಪ್ರೊ. ಸಮತಾ ಬಿ. ದೇಶಮಾನೆ ರವರ ಮಾರ್ಗದರ್ಶನದಲ್ಲಿ ಮಂಡಿಸಿದ “ಮಕ್ಕಳ ಅಪೌಷ್ಟಿಕತೆ ಕುರಿತು: ಒಂದು ಸಮಾಜಶಾಸ್ತ್ರೀಯ ಅಧ್ಯಯನ” (ವಿಶೇಷವಾಗಿ ರಾಯಚೂರು ಜಿಲ್ಲೆಯನ್ನು ಅನುಲಕ್ಷಿಸಿ) ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.
ಶಿವರಾಜ ಅವರು ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಮೂಡಲಗುಂಡ ನಿವಾಸಿಯಾದ ಶ್ರೀ ಅಯ್ಯಪ್ಪ ಮತ್ತು ಶ್ರೀಮತಿ ಶಿವಮ್ಮ ದಂಪತಿಯ ಹಿರಿಯ ಪುತ್ರ.












































































