ಬೆಂಗಳೂರು: ನಾಡಿನ ಹಿರಿಯ ವಿದ್ವಾಂಸ ಬನ್ನಂಜೆ ಗೋವಿಂದಾಚಾರ್ಯ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ವೇದ, ಪುರಾಣಗಳ ಕುರಿತ ಅವರ ಪ್ರವಚನಗಳು, ಕೃತಿಗಳು ಹಾಗೂ ಅಸಂಖ್ಯ ಬರಹಗಳು ಧಾರ್ಮಿಕ ಪ್ರಜ್ಞೆಯನ್ನು ಜಾಗೃತ ಗೊಳಿಸುವಂತಿದ್ದವು. ಅವರ ನಿಧನದಿಂದ ಸಾರಸ್ವತ ಲೋಕದ ಅಗಾಧ ಪ್ರತಿಭೆ ಯೊಂದನ್ನು ಕಳೆದುಕೊಂಡಂತಾಗಿದೆ.
ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ಯನ್ನು ಕರುಣಿಸಲಿ, ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರು ಹಾಗೂ ಅಸಂಖ್ಯ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸು ವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
https://mobile.twitter.com/BSYBJP/status/1338018715586052096