ಮಂಗಳೂರು: ಬಿಜೆಪಿಯ ಭದ್ರಕೋಟೆ ಬಂಟ್ವಾಳದಲ್ಲಿ ಕೇಸರಿ ಸೈನ್ಯ ಮತ್ತೊಮ್ಮೆ ವಿಜಯಪತಾಕೆ ಹಾರಿಸುವ ರಣೋತ್ಸಾಹದಲ್ಲಿದೆ. ಶಾಸಕ ರಾಜೇಶ್ ನಾಯ್ಕ್ ಅವರು ಮತ್ತೊಮ್ಮೆ ಅಖಾಡಕ್ಕೆ ಧುಮುಕಲು ಸಜ್ಜಾಗಿದ್ದು ನಾಳೆ ಉಮೇದುವಾರಿಕೆ ಸಲ್ಲಿಸಲಿದ್ದಾರೆ.
ಏಪ್ರಿಲ್ 15 ರ ಶನಿವಾರದಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಪಕ್ಷದ ಬಂಟ್ವಾಳ ಘಟಕ ತಿಳಿಸಿದೆ. ಬಂಟ್ವಾಳದಲ್ಲಿ ಮತ್ತೆ ಗೆದ್ದು ಬೀರುವ ಸಂಬಂಧ ಕೇಸರಿ ಕಾರ್ಯಕರ್ತರು ಈಗಾಗಲೇ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಬಹುತೇಕ ಹಳ್ಳಿಗಳನ್ನೇ ಹೊಂದಿದ್ದರೂ ಕಳೆದೈದು ವರ್ಷಗಳಲ್ಲಿ ಈ ಕ್ಷೇತ್ರದಲ್ಲಿ ಅಭೂತಪೂರ್ವ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿರುವ ಶಾಸಕ ರಾಜೇಶ್ ನಾಯ್ಕ್ ಅವರು ಈ ಬಾರಿ ಪುನರಾಯ್ಕೆ ಆಗಬೇಕೆಂದು ಕಾರ್ಯಕರ್ತರು ನಿರಂತರ ಕೆಲಸ ಮಾಡುತ್ತಿದ್ದಾರೆ.
ಉಮೇದುವಾರಿಕೆಗೆ ಮುನ್ನ ಶಕ್ತಿಪ್ರದರ್ಶನ..
ರಾಜೇಶ್ ನಾಯ್ಕ್ ಅವರು ಬಿಜೆಪಿ ಹುರಿಯಾಳಾಗಿ ಶನಿವಾರ ಉಮೇದುವಾರಿಕೆ ಸಲ್ಲಿಸಲಿದ್ದಾರೆ. ಆ ಸಂದರ್ಭದಲ್ಲೇ ಶಕ್ತಿಪ್ರದರ್ಶನ ನಡೆಸಲು ಬಿಜೆಪಿ ಸಿದ್ದತೆ ನಡೆಸಿದ್ದಾರೆ. ನಾಮಪತ್ರ ಸಲ್ಲಿಕೆಗೆ ಮುನ್ನ ಬೆಳಿಗ್ಗೆ 8.00 ಗಂಟೆಗೆ ಕರಾವಳಿಯ ಪ್ರಸಿದ್ದ ಪುಣ್ಯಕ್ಷೇತ್ರ ಪೊಳಲಿಯಿಂದ ಶಾಸಕ ರಾಜೇಶ್ ನಾಯ್ಕ್ ಅವರು ಕಾರ್ಯಕರ್ತರ ಜೊತೆ ಪಾದಯಾತ್ರೆ ಆರಂಭಿಸಲಿದ್ದಾರೆ. 11 ಗಂಟೆ ಸುಮಾರಿಗೆ ಬಿ.ಸಿ.ರೋಡ್ ಕೈಕಂಬ ದ್ವಾರ ಬಳಿ ತಲುಪಿ, ಅಲ್ಲಿಂದ ಸಾವಿರಾರು ಕಾರ್ಯಕರ್ತರು ಹಾಗೂ ಬೆಂಬಲಿಗರೊಂದಿಗೆ ಬ್ರಹತ್ ಮೆರವಣಿಗೆ ಮೂಲಕ ತಾಲೂಕು ಕಚೇರಿಯತ್ತ ತೆರಳಲಿದ್ದಾರೆ. ಬಳಿಕ ನಾಮಪತ್ರ ಸಲ್ಲಿಸುವರು ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.
























































ಉಮೇದುವಾರಿಕೆಗೆ ಮುನ್ನ ಶಕ್ತಿಪ್ರದರ್ಶನ..