ಬೆಂಗಳೂರು: ಬಸವ ಜಯಂತಿ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಬಸವೇಶ್ವರ ವೃತ್ತದಲ್ಲಿರುವ ಬಸವಣ್ಣ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.
ಬೇಲಿ ಮಠದ ಶ್ರೀ ಶಿವರುದ್ರ ಸ್ವಾಮೀಜಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಬಿ.ಡಿ.ಎ. ಅಧ್ಯಕ್ಷ ಎಸ್. ಆರ್.ವಿಶ್ವನಾಥ್, ಸಂಸದ ಪಿ.ಸಿ.ಮೋಹನ್ ,ಬಿ.ಬಿ.ಎಂ.ಪಿ ಆಯುಕ್ತ ಗೌರವ್ ಗುಪ್ತಾ, ಬಸವ ಸಮಿತಿ ಅಧ್ಯಕ್ಷ ಡಾ: ಸಿ.ಸೋಮಶೇಖರ್ ಉಪಸ್ಥಿತರಿದ್ದರು.
ಇದಕ್ಕೂ ಮುನ್ನ ಸಿಎಂ ಯಡಿಯೂರಪ್ಪ ಅವರು, ಬೆಂಗಳೂರಿನಲ್ಲಿರುವ ತಮ್ಮ ನಿವಾಸದಲ್ಲೂ ಬಸವ ಜಯಂತಿ ಆಚರಿಸಿದರು. ಬಸವೇಶ್ವರರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು.
ಬಿ.ಡಿ.ಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ಸಂಸದ ಪಿ.ಸಿ.ಮೋಹನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು