ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ರಾಜ್ಯದ ಸಿಎಂಗೆ ರಾಜಕೀಯ ನಾಯಕರು ಹಾಗೂ ಗಣ್ಯರು ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.
63 ನೇ ಹುಟ್ಟು ಹಬ್ಬ ಆಚರಿಸುತ್ತಿರುವ ಸಂದರ್ಭದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ,ಅವರಿಂದು ಹುಬ್ಬಳ್ಳಿಯಲ್ಲಿ ತಮ್ಮ ತಂದೆ ತಾಯಿಯ ಸಮಾಧಿಗೆ ಭೇಟಿ ನೀಡಿ ಗೌರವ ಸಲ್ಲಿಸಿದರು.
ಇದೇ ವೇಳೆ, ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭ ಹಾರೈಸಿದ್ದಾರೆ.
Birthday greetings to Karnataka CM Shri @BSBommai Ji. He is working assiduously for the all-round progress of Karnataka. May he lead a long and healthy life in service of the people.
— Narendra Modi (@narendramodi) January 28, 2023
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರೂ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ‘ರಾಜ್ಯದ ಅಭಿವೃದ್ಧಿಗಾಗಿ ಹಗಲಿರುಳು ದುಡಿಯುತ್ತಿರುವ ಬಸವಣ್ಣರವರಿಗೆ ಗುರು ದತ್ತಾತ್ರೇಯರ ಪರಿಪೂರ್ಣ ಅನುಗ್ರಹ ಮತ್ತು ಸಂಪೂರ್ಣ ಆಶೀರ್ವಾದ ಸದಾ ಇರಲಿ ಎಂದು ಪ್ರಾರ್ಥಿಸುತ್ತೇನೆ’ ಎಂದವರು ಹೇಳಿದ್ದಾರೆ.
ಮುಖ್ಯಮಂತ್ರಿಗಳು ಹಾಗೂ ಆತ್ಮೀಯರಾದ ಸನ್ಮಾನ್ಯ ಶ್ರೀ @BSBommai ಅವರಿಗೆ ಹುಟ್ಟು ಹಬ್ಬದ ಪ್ರೀತಿಯ ಶುಭಾಶಯಗಳು.
ರಾಜ್ಯದ ಅಭಿವೃದ್ಧಿಗಾಗಿ ಹಗಲಿರುಳು ದುಡಿಯುತ್ತಿರುವ ಬಸವಣ್ಣರವರಿಗೆ ಗುರು ದತ್ತಾತ್ರೇಯರ ಪರಿಪೂರ್ಣ ಅನುಗ್ರಹ ಮತ್ತು ಸಂಪೂರ್ಣ ಆಶೀರ್ವಾದ ಸದಾ ಇರಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/CCmSe55c8f
— C T Ravi 🇮🇳 ಸಿ ಟಿ ರವಿ (Modi Ka Parivar) (@CTRavi_BJP) January 28, 2023