ದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರುದ್ಧ ಪ್ರತಿಭಟನೆ ತೀವ್ರಗೊಂಡಿದ್ದು, ಅನ್ನದಾತರ ಆಕ್ರೋಶಕ್ಕೆ ಬಿಜೆಪಿ ಕಚೇರಿ ಹಾನಿಗೀಡಾಗಿದೆ.
ಪಂಜಾಬ್’ನ ಬಟಿಂಡಾದಲ್ಲಿ ಶುಕ್ರವಾರ ರೈತರ ಪ್ರತಿಭಟನೆ ವೇಳೆ ಉದ್ರಿಕ್ತರು ಬಿಜೆಪಿ ಕಚೇರಿ ಮೇಲೆ ದಾಳಿ ಮಾಡಿದ್ದಾರೆ.
ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಜನ್ಮ ದಿನಾಚರಣೆ ಕಾರ್ಯಕ್ರಮ ಸಂದರ್ಭದಲ್ಲಿ ಹೊರಗಡೆ ರತರು ಪ್ರತಿಭಟನೆ ನಡೆಸುತ್ತಿದ್ದರು. ರೈತರ ಪ್ರತಿಭಟನೆ ನಡುವೆ ಕೆಲವರು ದಾಂಧಲೆ ನಡೆಸಿದ್ದಾರೆ. ಬಿಜೆಪಿ ಕಚೇರಿಯ ಕುರ್ಚಿ, ಟಿವಿ ಸಹಿತ ಪೀಠೋಪಕರಣಗಳನ್ನು ಹಾನಿಗೊಳಿಸಿದ್ದಾರೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.


























































