ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ದೃಷ್ಟಿಯಿಂದ ಪಕ್ಷವನ್ನು ಸಂಘಟಿಸಲು ರಾಜ್ಯ ಬಿಜೆಪಿ ಅಧ್ಯಕ್ಷರು ಮತ್ತು ಸಂಸದರಾದ ನಳಿನ್ ಕುಮಾರ್ ಕಟೀಲ್ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಮೂರು ದಿವಸಗಳ ಸಭೆ ಜನವರಿ 25, 26, 27 ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ ಎಂದು ರಾಜ್ಯ ಉಪಾಧ್ಯಕ್ಷರಾದ ನಿರ್ಮಲ್ ಕುಮಾರ್ ಸುರಾಣಾ ಅವರು ತಿಳಿಸಿದ್ದಾರೆ.
ಬೆಂಗಳೂರು ಉತ್ತರ ಜಿಲ್ಲೆ, ದಕ್ಷಿಣ ಜಿಲ್ಲೆ, ಮತ್ತು ಕೇಂದ್ರ ಜಿಲ್ಲಾ ಪದಾಧಿಕಾರಿಗಳು, ಮಂಡಳಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಶಾಸಕರು ಹಾಗೂ ಚುನಾಯಿತ ಜನಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಈ ಸಭೆ ಜರುಗಲಿದೆ ಎಂದು ಅವರು ತಿಳಿಸಿದ್ದಾರೆ.