ಬೆಂಗಳೂರು: ಬೇಸಗೆ ರಜೆಯ ಸಂದರ್ಭದಲ್ಲಿ ದೂರದ ಊರಿಲಿಗಳಿಗೆ ಪ್ರವಾಸ ತೆರಳುವ ಸಂದರ್ಭದಲ್ಲಿ ಎಚ್ಚರ ವಹಿಸುವಂತೆ ಪೊಲೀಸರು ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ನೀಡಿರುವ ಹೇಳಿಕೆ ಗಮನಸೆಳೆದಿದೆ.
ಬೆಂಗಳೂರು ನಗರದಲ್ಲಿ ಇತ್ತೀಚೆಗೆ ಕಳ್ಳತನ ಪ್ರಕರಣಗಳು ಮರುಕಳಿಸುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಎಚ್ಚರ ಅಗತ್ಯ ಎಂದವರು ಪ್ರತಿಪಾದಿಸಿದ್ದಾರೆ ದೂರದ ವೂರುಗಳಿಗೆ ಪ್ರವಾಸ ತೆರಳಿಲುವ ಸಂದರ್ಭದಲ್ಲಿ ಮನೆಗೆ ಬೀಗ ಹಾಕಿದರೂ ಹೆಚ್ಚಿನ ಎಚ್ಚರಿಕೆ ಕ್ರಮಗಳನ್ನು ವಹಿಸಬೇಕಿದೆ ಎಂದು ದಯಾನಂದ್ ಸೂಚನೆ ನೀಡಿದ್ದಾರೆ.
ಪ್ರವಾಸ ತೆರಳುವ ಬೆಳೆಬಾಳುವ ವಸ್ತುಗಳನ್ನು ಬ್ಯಾಂಕಿನಲ್ಲಿ ಅಥವಾ ಲಾಕರ್‌ಗಳಲ್ಲಿ ಇಡುವುದು ಸೂಕ್ತ. ಜೊತೆಗೆ ಹೆಚ್ಚು ದಿನ ಪ್ರವಾಸ ಹೋಗುವುದಿದ್ದರೆ ಪೊಲೀಸರಿಗೆ ಮಾಹಿತಿ ನೀಡಿದಲ್ಲಿ ಪೊಲೀಸರು ಗಸ್ತು ಹೆಚ್ಚಿಸುವುದಲ್ಲದೆ, ಕಣ್ಗಾವಲು ಹಾಕಲಾಗುವುದು ಎಂದು ಹೇಳಿದ್ದಾರೆ.
ಸಿಸಿಟಿವಿ ಕ್ಯಾಮೆರಾ ಅಳವಡಿಸಿಕೊಳ್ಳಬೇಕು, ಬೀಗದ ಕೀಯನ್ನು ಮನೆ ಪಕ್ಕದಲ್ಲಿ ಇಟ್ಟು ಹೋಗುವ ಅಭ್ಯಾಸ ಬೇಡ ಎಂದವರು ಹೇಳಿದ್ದಾರೆ.