ಮೈಸೂರು: ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ಬೆಡ್ ಬ್ಲಾಕಿಂಗ್ ದಂಧೆ ನಡೆಯುತ್ತಿದುದನ್ನು ಸಂಸದ ತೇಜಸ್ವಿ ಸೂರ್ಯ ಬೇಧಿಸಿದ್ದಾರೆ. ಈ ಅಕ್ರಮ ದಂಧೆ ಕುರಿತ ತನಿಖೆ ಪ್ರಗತಿಯಲ್ಲಿರುವಾಗಲೇ ಮೈಸೂರಿನಲ್ಲೂ ಬೆಡ್ ಬ್ಲಾಕಿಂಗ್ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.
ಮೈಸೂರಿನಲ್ಲಿಯೂ ಬೆಡ್ ಬ್ಲಾಕಿಂಗ್ ದಂಧೆ ಎಗ್ಗಿಲ್ಲದೇ ನಡೆಯುತ್ತಿದೆ ಎಂದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವು ಸೋಂಕಿತರಿಗೆ ಬೆಡ್ ಸಿಗದೇ ಸಾವನ್ನಪ್ಪುತ್ತಿದ್ದಾರೆ, ಆದರೆ ಬಿಜೆಪಿ ನಾಯಕರಿಗೆ ಯಾವುದೇ ಅಡಚಣೆಯಿಲ್ಲದೇ ಸರಾಗವಾಗಿ ಬೆಡ್ ಸಿಗುತ್ತಿದೆ ಎಂದು ದೂರಿದರು. ವಾರ್ ರೂಂ ಮತ್ತು ಕೋವಿಡ್ ಕಾರ್ಯಪಡೆಯಲ್ಲಿರುವ ಬಿಜೆಪಿ ಕಾರ್ಯಕರ್ತರು ತಮ್ಮ ನಾಯಕರಿಗೆ ಅನುಕೂಲವಾಗುವ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಲಕ್ಷ್ಮಣ್ ಆರೋಪ ಮಾಡಿದ್ದಾರೆ.