ಬೆಳಗಾವಿ: ಕೇಂದ್ರ ಸಚಿವ ಸುರೇಶ ಅಂಗಡಿ ನಿಧನದಿಂದಾಗಿ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಚುನಾವಣೆಗೆ ರಾಜಕೀಯ ಪಕ್ಷಗಳು ಸಜ್ಜಾಗುತ್ತಿವೆ. ಮುಂಬರುವ ಉಪಚುನಾವಣೆಯಲ್ಲಿ ಸುರೇಶ ಅಂಗಡಿಯವರ ಪತ್ನಿಗೆ ಟಿಕೆಟ್ ನೀಡಬೆಂಬ ಒತ್ತಡ ಬಿಜೆಪಿ ನಾಯಕರಿಂದ ಸಾಗಿದೆ.
ಇನ್ನೊಂದೆಡೆ ಕಾಂಗ್ರೆಸ್ ಪಕ್ಷ ಕೂಡಾ ಈ ಬಾರಿ ವರ್ಚಸ್ವೀ ನಾಯನನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸುತ್ತಿದೆ. ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಬೆಳಗಾವಿ ಭೇಟಿ ಕುತೂಹಲದ ಕೇಂದ್ರಬಿಂದುವಾಯಿತು.
ಈ ನಡುವೆ, ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಕಚೇರಿಯನ್ನು ಡಿ.ಕೆ.ಶಿವಕುಮಾರ್ ಶುಕ್ರವಾರ ಉದ್ಘಾಟಿಸಿದರು. ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಈಶ್ವರ್ ಖಂಡ್ರೆ, ಶಾಸಕಿಯರಾದ ಲಕ್ಷ್ಮಿ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್, ಹಿರಿಯ ನಾಯಕ ವೀರಣ್ಣ ಮತ್ತಿಕಟ್ಟಿ ಮೊದಲಾದ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಇದೇ ವೇಳೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪಕ್ಷದ ಬೆಳಗಾವಿ ಜಿಲ್ಲಾ ನಾಯಕರು, ಪರಾಜಿತ ಅಭ್ಯರ್ಥಿಗಳು, ಬ್ಲಾಕ್ ಅಧ್ಯಕ್ಷರುಗಳ ಸಭೆ ನಡೆಸಿದರು.