ಬೆಳಗಾವಿ: ಕೊರೋನಾ ಸಂಕಟ ಕಾಲದಲ್ಲಿ ಜನತೆಗೆ ಅನುಕೂಲವಾಗುವಂತೆ ರಾಜ್ಯ ಸರ್ಕಾರ ಆರ್ಥಿಕ ನೆರವು ನೀಡಬೇಕೆಂದು ಒತ್ತಾಯಿಸಿ ಬೆಳಗಾವಿಯಲ್ಲಿ ಜೆಡಿಎಸ್ ಇಂದು ನಡೆಸಿದ ಪ್ರತಿಭಟನೆ ಗಮನಸೆಳೆಯಿತು.
ಬೆಳಗಾವಿ ಜಿಲ್ಲಾ ಜೆಡಿಎಸ್ ಅಧ್ಕಕ್ಷರೂ ಆದ, ಜಿಲ್ಲಾ ಪಂಚಾಯಿತ್ ಸದಸ್ಯ ಶಂಕರ ಭ ಮಾಡಲಗಿ ಅವರ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಿತು. ಕೊರೋನಾ ಎರಡನೇ ಅಲೆಯಲ್ಲಿ ನರಳುತ್ತಿರುವ ಜನರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರವು ಅಗತ್ಯ ವಸ್ತುಗಳ ಬೆಲೆ ಏರಿಕೆಯ ಮೂಲಕ ಬರೆ ಎಳೆದಿದೆ. ವಿದ್ಯುತ್ ಬಿಲ್ ಹಾಗೂ ಪೆಟ್ರೋಲ್ ಮತ್ತು ಡಿಸೇಲ್ ದರ ಹೆಚ್ಚಳವಾಗಿದ್ದು ಹಾಗೂ ವ್ಯಾಪಾರ-ವಹಿವಾಟಿ ಅಚಲಂಬಿತರೂ ಸಂಕಷ್ಟದಲ್ಲಿದ್ದಾರೆ. ಸಂಕಷ್ಟದಲ್ಲಿರುವ ಈ ಜನರಿಗೆ ತಲಾ ಹತ್ತು ಸಾವಿರ ರೂಪಾಯಿ ಆರ್ಥಿಕ ನೆರವು ನೀಡಬೇಕೆಂದು ಶಂಕರ ಭ ಮಾಡಲಗಿ ಅವರು ಸರ್ಕಾರವನ್ನು ಒತ್ತಾಯಿಸಿದರು.
ಕೋವಿಡ್ ನಿಂದ ಮರಣ ಹೊಂದಿದ ವ್ಯಕ್ತಿಯ ಕುಟುಂಬದವರಿಗೆ ತಲಾ ಹತ್ತು ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದೂ ಆಗ್ರಹಿಸಿದರು. ರಾಜ್ಯದ ಜನರ ಸಂಕಷ್ಟಕ್ಕೆ ರಾಜ್ಯ ಸರ್ಕಾರ ಸ್ಪಂಧಿಸದಿದದ್ದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಶಂಕರ ಭ ಮಾಡಲಗಿ ಅವರು ಎಚ್ಚರಿಕೆ ನೀಡಿದರು.
ಇದೇ ವೇಳೆ ಸಂಕಷ್ಟದಲ್ಲಿರುವ ಜನರಿಗೆ ಆರ್ಥಿಕ ನೆರವು ನೀಡಬೇಕೆಂಬ ಮನವಿಯನ್ನು ಜೆಡಿಎಸ್ ಕಾರ್ಯಕರ್ತರು ಹಾಗೂ ಎಲ್ಲಾ ಪದಾಧಿಕಾರಿಗಳ ಮೂಲಕ ಜಿಲ್ಲಾಧಿಕಾರಿಗೆ ಸಲ್ಲಿಸಲಾಯಿತು.