ಬೆಳಗಾವಿ: ರಾಜ್ಯ ಬಿಜೆಪಿಯಲ್ಲಿ ನಾಯಕರ ಹಾಗೂ ಬೆಂಬಲಿಗರ ಆಕ್ರೋಶ ಸ್ಫೋಟಗೊಂಡಿದೆ.
ಶ್ರೀಮಂತ ಪಾಟೀಲ್ ಅವರಿಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನಲೆ ಬೆಂಬಲಿಗರು ಪ್ರತಿಭಟನೆ ನಡೆಸಿ ಬಿಜೆಪಿ ನಾಯಕರ ವಿರುದ್ದ ಆಕೋಶ ಹೊರಹಾಕಿದರು.
ಕಾಗವಾಡ ಪಟ್ಟಣದ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಶ್ರೀಮಂತ ಪಾಟೀಲ ಬೆಂಬಲಿಗರು, ಟೈರ್‌ಗೆ ಬೆಂಕಿ ಹಚ್ವಿ ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಸಚೀವ ಶ್ರೀಮಂತ ಪಾಟೀಲಗೆ ಮಂತ್ರಿಗಿರಿ ಕೊಡುವಂತೆ ಈ ಪ್ರತಿಭಟನಾಕಾರರು ಒತ್ತಾಯಿಸಿದರು.